
ಚನ್ನಗಿರಿ: ಹುಬ್ಬಳ್ಳಿ ತಾಲ್ಲೂಕು ಇನಾಮ ವೀರಾಪುರ ಗ್ರಾಮದಲ್ಲಿ ಈಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿ ಪರ ಸಂಘಟನೆಗಳ ಒಕ್ಕೂಟದವರು ಮಂಗಳವಾರ ಪ್ರತಿಭಟನೆ ನಡೆಸಿದರು.
‘ಮಾನ್ಯಾಳ ತಂದೆಗೆ ಕಠಿಣ ಶಿಕ್ಷೆ ವಿಧಿಸಬೇಕು. ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಅಂಬೇಡ್ಕರ್ ನುಡಿಯಂತೆ ಸರ್ವರಿಗೂ ಸಮಾನ ಅವಕಾಶದಿಂದ ಬದುಕುವ ಕಾನೂನನ್ನು ಸರ್ಕಾರ ರೂಪಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಗಾಂಧಿ ವೃತ್ತಕ್ಕೆ ತಲುಪಿತು. ಅಲ್ಲಿ ಮಾನವ ಸರಪಳಿ ರಚಿಸಿ ಹೆದ್ದಾರಿ ತಡೆ ನಡೆಸಿದರು. ನಂತರ ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ಬಂದು ಗ್ರೇಡ್– 2 ತಹಶೀಲ್ದಾರ್ ಕೆ.ಆರ್. ರುಕ್ಮಿಣಿಬಾಯಿ ಅವರಿಗೆ ಮನವಿ ಸಲ್ಲಿಸಿದರು.
ಡಿಎಸ್ಎಸ್ ತಾಲ್ಲೂಕು ಸಂಚಾಲಕ ಚಿತ್ರಲಿಂಗಪ್ಪ ಗಾಂಧಿನಗರ, ಕುಬೇಂದ್ರಸ್ವಾಮಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಸವಾಪುರ ರಂಗನಾಥ, ಮಹಮದ್ ನವಾಜ್, ಉಸ್ಮಾನ್ ಶರೀಫ್, ತನ್ವೀರ್, ಓನಕೆ ಒಬವ್ವ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ, ಸರೋಜಮ್ಮ, ನಾಗರಾಜ್, ಹನುಮಂತಪ್ಪ, ಜಾವಿದ್ ಬಾಷಾ, ಜಫ್ರುಲ್ಲಾಸಾಬ್, ಚಿರಂಜೀವಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.