ಹೊನ್ನಾಳಿಯ ಸಾಹಿತಿ, ನಿವೃತ್ತ ಉಪನ್ಯಾಸಕ ಯು.ಎನ್. ಸಂಗನಾಳ ಮಠ
ಹೊನ್ನಾಳಿ: ಇಲ್ಲಿನ ಸಾಹಿತಿ, ನಿವೃತ್ತ ಉಪನ್ಯಾಸಕ ಯು.ಎನ್. ಸಂಗನಾಳ ಮಠ ಅವರಿಗೆ ಬೆಂಗಳೂರಿನ ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಹಾಗೂ ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ ಜಂಟಿಯಾಗಿ ಕೊಡಮಾಡುವ 2025ನೇ ಸಾಲಿನ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಿದೆ.
ಸೆ. 7ರಂದು ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಪ್ರಶಸ್ತಿಯನ್ನು ವಿತರಿಸದ್ದಾರೆ. ಪರಿಷತ್ತಿನ ಸೋಮಶೇಖರ್, ಎಸ್.ಜಿ. ಸುಶೀಲಮ್ಮ, ಸತೀಶಕುಮಾರ್, ಎಸ್. ಹೊಸಮನಿ ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.