ADVERTISEMENT

ಅನ್ಯಾಯವಾಗಿದ್ದರೆ ಸಿಎಂ ಜೊತೆ ಚರ್ಚಿಸಿ ಬಗೆಹರಿಸಿಕೊಳ್ಳಲಿ: ಸತೀಶ್ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2023, 5:26 IST
Last Updated 2 ಅಕ್ಟೋಬರ್ 2023, 5:26 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ದಾವಣಗೆರೆ: ‘ಏನೇ ಸಮಸ್ಯೆಗಳು ಇದ್ದರೆ ಮುಖ್ಯಮಂತ್ರಿ ಜೊತೆ ನೇರವಾಗಿ ಮಾತನಾಡಿ ಬಗೆಹರಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿದರು.

ವಾಲ್ಮೀಕಿ ಗುರುಪೀಠದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಿದ್ದರೆ ಸರ್ಕಾರದ ವೇದಿಕೆಯಲ್ಲಿ ಚರ್ಚಿಸಬೇಕು. ಸರ್ಕಾರ ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗಬೇಕು. ಅನ್ಯಾಯವಾಗಿರುವುದನ್ನು ನಿರ್ದಿಷ್ಟವಾಗಿ ಹೇಳಬೇಕು’ ಎಂದರು.

ADVERTISEMENT

‘ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ನಿಯೋಜನೆ ನಿಯೋಜಿಸಲು ಆಗುವುದಿಲ್ಲ. ಅವರ ಕೆಲಸ, ಸಾಮರ್ಥ್ಯ ನೋಡಿ ಮಾಡಬೇಕು. ಜಿಲ್ಲೆಯಲ್ಲಿ ಅವರ ಜಾತಿಯವರು ಇಲ್ಲದಿದ್ದರೆ ಇಂತಹವರೇ ಬೇಕು ಎಂದು ಕೇಳುತ್ತಾರೆ. ಆಗ ಜಾತಿ ಬರುವುದಿಲ್ಲ. ಅವರ ಕೆಲಸ ಬರುತ್ತದೆ’ ಎಂದು ಸಮರ್ಥಿಸಿಕೊಂಡರು.

‘ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಯಿ ಮುಖ್ಯಮಂತ್ರಿ ಆಗಿದ್ದಾಗ ಜಾತಿ ವಿಚಾರ ಬರಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಬಂದಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.