ADVERTISEMENT

ವಯಸ್ಸು ಇದ್ದಿದ್ರೆ ಸಿಎಂ ಆಗುತ್ತಿದ್ದೆ: ಶಾಮನೂರು ಶಿವಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 16:20 IST
Last Updated 23 ಜುಲೈ 2021, 16:20 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ದಾವಣಗೆರೆ: ‘ನನಗೆ ವಯಸ್ಸು ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದೆ. ಏನು ಮಾಡುವುದು ವಯಸ್ಸು ಇಲ್ಲ’ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಅಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಮುಖ್ಯಮಂತ್ರಿಯೇ ಆಗುತ್ತಿದೆ. ಏನು ಮಾಡುವುದು ವಯಸ್ಸು ಇಲ್ಲ. ಇದೇ ಕಾರಣಕ್ಕೆ ಸುಮ್ಮನೆ ಇದ್ದೇನೆ.ಈಗ ಇರುವ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಸ್ಥಾನವೇ ಸಾಕು’ ಎಂದರು.

‘ಇನ್ನು ಮೂರು ದಿನ ಕಾದು ನೋಡಿ.ಏನು ಸಮಾಚಾರ ಎಂಬುದಕ್ಕೆ ಉತ್ತರ ಸಿಗುತ್ತದೆ. ಎಲ್ಲಾ ನೀವೇ ಹೇಳಬೇಡಿ. ಬಿಜೆಪಿ ಹೈಕಮಾಂಡ್ ಹೇಳುತ್ತದೆ’ ಎಂದು ಸುದ್ದಿಗಾರರಿಗೆ ಉತ್ತರಿಸಿದರು.

ADVERTISEMENT

‘ನಾವೂ ವೀರಶೈವ ಮಹಾಸಭೆಯಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.