ADVERTISEMENT

ಹೊನ್ನಾಳಿ | ಅಕ್ರಮ ಮರುಳು ಸಾಗಾಟ: ಟ್ರ್ಯಾಕ್ಟರ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 6:34 IST
Last Updated 17 ಅಕ್ಟೋಬರ್ 2025, 6:34 IST
ಹೊನ್ನಾಳಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಐದು ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದ ಪೊಲೀಸರು 
ಹೊನ್ನಾಳಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಐದು ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದ ಪೊಲೀಸರು    

ಹೊನ್ನಾಳಿ: ತಾಲ್ಲೂಕಿನ ಬೇಲಿ ಮಲ್ಲೂರು ಗ್ರಾಮದ ಸಮೀಪದಲ್ಲಿರುವ ತುಂಗಭದ್ರಾ ನದಿಯಲ್ಲಿನ ಮರಳನ್ನು ಅಕ್ರಮವಾಗಿ  ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳ ಮೇಲೆ ಸಿಪಿಐ ಸುನೀಲ್‍ಕುಮಾರ್ ದಾಳಿ ನಡೆಸಿ, ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಸಿಪಿಐ ಸುನೀಲ್ ಕುಮಾರ್, ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಮರಳು ತುಂಬಿದ 5 ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ಯಾವುದೇ ಪರವಾನಿಗೆ ಪಡೆದಿಲ್ಲವಾದ್ದರಿಂದ ಅಕ್ರಮ ಸಾಗಣೆದಾರರ ಮೇಲೆ ( ಚಾಲಕರು ಮತ್ತು ಮಾಲೀಕರ ಮೇಲೆ ) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವರದಿ ನೀಡಲಾಗಿದೆ ಎಂದು ತಿಳಿಸಿದರು.

ADVERTISEMENT

‌ದಾವಣಗೆರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ನಿರ್ದೇಶಕಿ ರಶ್ಮೀ ಮಾತನಾಡಿ, ಪೊಲೀಸರಿಂದ ವರದಿ ಬಂದ ತಕ್ಷಣ ದಂಡ ವಸೂಲಿ ಮಾಡಲಾಗುವುದು. ಅಕ್ರಮ ಸಾಗಾಣಿಕೆದಾರರ ಮೇಲೆ ಪೊಲೀಸರೇ ದೂರು ದಾಖಲಿಸುತ್ತಾರೆ ಎಂದು ಹೇಳಿದರು.

ಆದರೆ ಸಿಪಿಐ ಸುನೀಲ್‍ಕುಮಾರ್, ಗಣಿ, ಭೂ ವಿಜ್ಞಾನ ಇಲಾಖೆಯಿಂದ ಶಿಫಾರಸ್ಸು ಮಾಡಿದರೆ ಮಾತ್ರ ನಾವು ದೂರು ಸ್ವೀಕರಿಸುತ್ತೇವೆ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಈ ಎರಡು ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇರುವುದರಿಂದ ಅಕ್ರಮ ಮರಳು ಸಾಗಾಣಿಕೆದಾರರ ಮೇಲೆ ಸರಿಯಾದ ಕ್ರಮ ಜರುಗಿಸುತ್ತಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಫೋನ್ ಸ್ವೀಕರಿಸದ ಅಧಿಕಾರಿ: ಹೊನ್ನಾಳಿ ಮತ್ತು ನ್ಯಾಮತಿ ಭಾಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಶಿವಪ್ರಸಾದ್ ಅವರಿಗೆ ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿದರೆ ಕರೆಗಳನ್ನು ಸ್ವೀಕರಿಸಲಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿ ರಶ್ಮೀ ಅವರ ಗಮನಕ್ಕೆ ತರಲಾಯಿತು. ಅವರು ಸಾಕಷ್ಟು ಎಚ್ಚರಿಕೆ ನೀಡಿದ್ದರೂ ಅವರ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನೊಮ್ಮೆ ಹೀಗೆ ಮಾಡಿದರೆ ನೋಟಿಸ್ ಕೊಡಲಾಗುವುದು ಎಂದು ಹೇಳಿದರು. 

1ಇಪಿ : 2ಇಪಿ : ಹೊನ್ನಾಳಿ ತಾ ಬೇಲಿಮಲ್ಲೂರು ತುಂಗಭದ್ರಾ ನದಿಯಲ್ಲಿ 5 ಟ್ರ್ಯಾಕ್ಟರ್ ಗಳಲ್ಲಿ ಮರಳು ಅಕ್ರಮವಾಗಿ ತುಂಬಿಕೊಂಡು ಸಾಗಿಸುತ್ತಿದ್ದವರ ಮೇಲೆ ದಾಳಿ ಮಾಡಿ ಪೊಲೀಸ್ ವಶಕ್ಕೆ ಪಡೆದುಕೊಂಡಿರುವುದು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.