
ದಾವಣಗೆರೆ: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.
1931 ಜೂನ್ 16ರಂದು ಶಾಮನೂರು ಕಲ್ಲಪ್ಪ–ಸಾವಿತ್ರಮ್ಮ ದಂಪತಿ ಪುತ್ರರಾಗಿ ಜನನ
ಇಂಟರ್ ಮಿಡಿಯಟ್ ವರೆಗೆ ಶಿಕ್ಷಣ
ತಂದೆಯ ‘ಶಾಮನೂರು ಕಲ್ಲಪ್ಪ ಅಂಡ್ ಸನ್ಸ್’ ಅಂಗಡಿಯಲ್ಲಿ ವ್ಯಾಪಾರ, ಉದ್ಯಮಿಯಾಗಿ ಬೆಳವಣಿಗೆ
1954ರಲ್ಲಿ ಚನ್ನಗಿರಿ ತಾಲ್ಲೂಕಿನ ವಡ್ನಾಳ್ ಗ್ರಾಮದ ಪಾರ್ವತಮ್ಮ ಅವರೊಂದಿಗೆ ವಿವಾಹ
ದಂಪತಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು
1969ರಲ್ಲಿ ನಗರಸಭಾ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆ
1971 ರಲ್ಲಿ ನಗರಸಭಾ ಸದಸ್ಯರಾಗಿ ಪುನರಾಯ್ಕೆ
1972ರಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ
1971ರಿಂದ 73ರವರೆಗೆ ದಾವಣಗೆರೆ ನಗರಸಭೆ ಅಧ್ಯಕ್ಷ
1978-80 ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ
1994-1998 ದಾವಣಗೆರೆ ಕ್ಷೇತ್ರದ ವಿಧಾನಸಭಾ ಸದಸ್ಯ
1998-99 ದಾವಣಗೆರೆ ಲೋಕಸಭಾ ಸದಸ್ಯ
1999 ಲೋಕಸಭಾ ಚುನಾವಣೆಯಲ್ಲಿ ಸೋಲು
2003 ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ
2008 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ
2013 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ತೋಟಗಾರಿಕೆ, ಎಪಿಎಂಸಿ ಸಚಿವ
2018ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ
2023ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ
ಕೆಪಿಸಿಸಿ ಖಾಯಂ ಖಜಾಂಚಿಯಾಗಿ ಬಹು ವರ್ಷ ಸೇವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.