ADVERTISEMENT

ಅಭಿವೃದ್ಧಿಯತ್ತ ಭಾರತ ದಾಪುಗಾಲು: ಚಂದ್ರಶೇಖರಯ್ಯ

ಧ್ವಜಾರೋಹಣ ನೆರವೇರಿಸಿದ ಎಸಿ ಚಂದ್ರಶೇಖರಯ್ಯ ಅಭಿಮತ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 3:11 IST
Last Updated 16 ಆಗಸ್ಟ್ 2021, 3:11 IST
ಹರಪನಹಳ್ಳಿ ತಾಲ್ಲೂಕು ಕ್ರೀಡಾಂಗಣದಲ್ಲಿ ಕೊರೊನಾ ವಾರಿಯರ್‌ಗಳನ್ನು ಸನ್ಮಾನಿಸಲಾಯಿತು.
ಹರಪನಹಳ್ಳಿ ತಾಲ್ಲೂಕು ಕ್ರೀಡಾಂಗಣದಲ್ಲಿ ಕೊರೊನಾ ವಾರಿಯರ್‌ಗಳನ್ನು ಸನ್ಮಾನಿಸಲಾಯಿತು.   

ಹರಪನಹಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಭಾರತವು ಸಾಕ್ಷರತೆ, ಅಹಾರ ಉತ್ಪಾದನೆ, ಆರ್ಥಿಕ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಎಂದು ಉಪವಿಭಾಗಾಧಿಕಾರಿ ಎಚ್.ಜಿ. ಚಂದ್ರಶೇಖರಯ್ಯ ಅನಿಸಿಕೆ ವ್ಯಕ್ತಪಡಿಸಿದರು.

ಪಟ್ಟಣದ ಕ್ರೀಡಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ‌ ಆಚರಣೆ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಡಿವೈಎಸ್‌ಪಿ ವಿ.ಎಸ್. ಹಾಲಮೂರ್ತಿ ರಾವ್ ಮಾತನಾಡಿ, ‘ತಾತ್ಸಾರ ಭಾವನೆಯಿಂದ ಕೋವಿಡ್ ಹರಡುತ್ತಿದೆ. ಪೊಲೀಸರು ದಂಡ ವಿಧಿಸುತ್ತಾರೆ ಎಂಬುದಕ್ಕಿಂತ ತಮ್ಮ ಪ್ರಾಣಗಳನ್ನು ತಾವು ಉಳಿಸಿಕೊಳ್ಳಲು ಮಾಸ್ಕ್‌ ಅನ್ನು ಕಡ್ಡಾಯವಾಗಿ ಧರಿಸಬೇಕು’ ಎಂದರು.

ADVERTISEMENT

ತಹಶೀಲ್ದಾರ್ ಎಲ್.ಎಂ. ನಂದೀಶ್, ಪುರಸಭೆ ಅಧ್ಯಕ್ಷ ಇಜಂತಕರ್ ಮಂಜುನಾಥ್, ಉಪಾಧ್ಯಕ್ಷೆ ನಿಟೂರು ಭೀಮವ್ವ ಸಣ್ಣಹಾಲಪ್ಪ, ಸಿಪಿಐ ನಾಗರಾಜ್ ಎಂ. ಕಮ್ಮಾರ್, ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.