ದಾವಣಗೆರೆ: ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನ್ ಹೊರ ಭಾಗದಲ್ಲಿ ಇರುವ ಇಂದಿರಾಗಾಂಧಿ ಚಿತ್ರಕ್ಕೆ ಕಿಡಿಗೇಡಿಗಳು ಎಂಜಿನ್ ಆಯಿಲ್ ಬಳಿದು ವಿರೂಪಗೊಳಿಸಿದ್ದಾರೆ.
ಶನಿವಾರ ರಾತ್ರಿ ವೇಳೆ ಕಾಂಪೌಂಡ್‌ನ ಒಳನುಗ್ಗಿ ಆಯಿಲ್ ಬಳಿದು ಹೋಗಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ವಲ್ಪ ಭಾಗವನ್ನು ಅಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಮಾತನಾಡಿ, ದಾವಣಗೆರೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು, ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಪೊಲೀಸರು ಸಾಮಾಜಿಕ ಜಾಲತಾಣಗಳನ್ನು ಹುಡುಕಿದರೆ ಆರೋಪಿಗಳನ್ನು ಪತ್ತೆ ಹಚ್ಚಬಹುದು. ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಅಲ್ಲಾವಲಿ ಗಾಜಿಖಾನ್, ಹುಲ್ಮನೆ ಗಣೇಶ್, ರಾಘು ದೊಡ್ಮನಿ, ಅಶ್ರಫ್ ಅಲಿ, ಕೆ.ಎಲ್.ಹರೀಶ್, ಬಸಾಪುರ ಗಿರೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.