
ತ್ಯಾವಣಿಗೆ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಸತಿ ಶಾಲೆ ಪೂರಕವಾಗಿವೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.
ಸಮೀಪದ ಹಿರೇಕೋಗಲೂರು ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ₹ 22 ಕೋಟಿ ವೆಚ್ಚದಲ್ಲಿ ಮುಂಜೂರಾಗಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಕಟ್ಟಡಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣ ಅವಕಾಶ ಕಲ್ಪಿಸುವ ಉದ್ದೇಶದಿಂದ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದು, ರಾಜ್ಯದಲ್ಲಿ ಶೈಕ್ಷಣಿಕ ಪ್ರಗತಿಯ ಹಿತ ದೃಷ್ಟಿಯಿಂದ ವಸತಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕ್ರಮವಹಿಸಿದೆ ಎಂದು ಹೇಳಿದರು.
ಕಾಮಾಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ವರ್ಷದೊಳಗಾಗಿ ಹಸ್ತಂತರಿಸಬೇಕು, ವಿಳಂಬವಾದರೇ ಸಹಿಸುವುದಿಲ್ಲಾ ಎಂದು ಸ್ಥಳದಲ್ಲಿದ್ದ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾ.ಪಂ. ಅಧ್ಯಕ್ಷೆ ಸುಮಾ ಕೃಷ್ಣಮೂರ್ತಿ, ಉಪಾಧ್ಯಕ್ಷ ಎ.ಡಿ. ರಮೇಶ್, ಸದಸ್ಯರಾದ ಸುಮಾ ಶಿವಕುಮಾರ್ ಜಗದೀಶ್, ಸತೀಶ್ ಗೌಡ ಕೆ.ಪಿ, ಮುಖಂಡರಾದ ಕೆ.ಪಿ. ವೆಂಕಟೇಶ್, ಎಚ್.ಯು. ಮಲ್ಲಿಕಾರ್ಜುನ್, ಬಿ. ಜಿಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.