
ದಾವಣಗೆರೆ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷಾರ್ಥಿಗಳು ಮುಖ್ಯ ಪರೀಕ್ಷೆಯಲ್ಲಿ ಕನ್ನಡದ ಬದಲು ಹಿಂದಿ, ಸಂಸ್ಕೃತದಂತಹ ಅನ್ಯಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎಂದು ‘ಇನ್‌ಸೈಟ್ ಐಎಎಸ್’ ಸಂಸ್ಥೆಯ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಕಳವಳ ವ್ಯಕ್ತಪಡಿಸಿದರು.
ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ‘ಕರ್ನಾಟಕ ಸೇವಾ ರತ್ನ ಬೆಳ್ಳಿ ಪದಕ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
‘ಐಎಎಸ್ ಪರೀಕ್ಷೆಯ ಆಕಾಂಕ್ಷಿಗಳು ಇಂಗ್ಲಿಷ್ ಜೊತೆಗೆ ಮಾತೃಭಾಷೆ ಆಯ್ಕೆ ಮಾಡಿಕೊಳ್ಳಬೇಕು. ಕನ್ನಡ ನಾಡಿನಲ್ಲಿ ಹುಟ್ಟಿ ಬೆಳೆದವರು ಕನ್ನಡ ಬಿಟ್ಟು ಬೇರೆ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದರೆ ಭವಿಷ್ಯದಲ್ಲಿ ಕನ್ನಡಕ್ಕೆ ಯಾವ ರೀತಿಯ ಕುತ್ತು ಎದುರಾಗಲಿದೆ ಎಂಬುದನ್ನು ಊಹಿಸಲು ಆಗದು’ ಎಂದರು.
ಪುರವರ್ಗ ಮಠದ ಓಂಕಾರ ಶಿವಚಾರ್ಯ ಸ್ವಾಮೀಜಿ, ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಸುನೀಲ್ ಕುಮಾರ್, ಬಿಜೆಪಿ ನಾಯಕಿ ಗಾಯಿತ್ರಿ ಸಿದ್ದೇಶ್ವರ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಮಾಜಿ ಮೇಯರ್ ಬಿ.ಜೆ. ಅಜಯ್‌ಕುಮಾರ್, ಎ.ಕೆ. ಫೌಂಡೇಶನ್ ಸಂಸ್ಥಾಪಕ ಕೆ.ಬಿ. ಕೊಟ್ರೇಶ್, ಪತ್ರಕರ್ತ ಬಿ.ಎನ್. ಮಲ್ಲೇಶ್, ಕನ್ನಡ ಚಳವಳಿ ಹೋರಾಟಗಾರ ಬಸವರಾಜ ಐರಣಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.