ADVERTISEMENT

ವಿವಿಧತೆಯಲ್ಲಿ ಏಕತೆ ಸಾರುವ ಸಂವಿಧಾನ

ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅಭಿಮತ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 4:36 IST
Last Updated 27 ನವೆಂಬರ್ 2025, 4:36 IST
ಜಗಳೂರಿಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಲೀಂ ಉಲ್ಲಾ, ಇಒ ಕೆಂಚಪ್ಪ ಮುಂತಾದವರು ಭಾಗವಹಿಸಿದ್ದರು
ಜಗಳೂರಿಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಲೀಂ ಉಲ್ಲಾ, ಇಒ ಕೆಂಚಪ್ಪ ಮುಂತಾದವರು ಭಾಗವಹಿಸಿದ್ದರು   

ಜಗಳೂರು: ವಿವಿಧತೆಯಲ್ಲಿ ಏಕತೆ ಹಾಗೂ ಸಮಾನತೆಯನ್ನು ಸಾರುವ ಭಾರತದ ಸಂವಿಧಾನ ದೇಶವನ್ನು ಸಮರ್ಥವಾಗಿ ಮುನ್ನಡೆಸುವ ದಾರಿದೀಪವಾಗಿದೆ ಎಂದು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅಭಿಪ್ರಾಯಪಟ್ಟರು.

ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲ್ಲೂಕು ಆಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಲವು ಜಾತಿ, ಧರ್ಮ, ಸಂಸ್ಕೃತಿ, ಆಚರಣೆಗಳಿಂದ ಕೂಡಿದ್ದ ದೇಶಕ್ಕೆ ಸಂವಿಧಾನ ರೂಪಿಸುವುದು ಸವಾಲಿನ ಕೆಲಸವಾಗಿತ್ತು. ಅಂಬೇಡ್ಕರ್ ಅದನ್ನು ಸಶಕ್ತವಾಗಿ ನಿಭಾಯಿಸಿದರು ಎಂದರು.

ADVERTISEMENT

ಸಂವಿಧಾನ ಪೀಠಿಕೆಯನ್ನು ಪ್ರತೀ ಮನೆಗಳಲ್ಲಿಟ್ಟು ಓದಬೇಕಿದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಬೇಕು ಕಾಂಗ್ರೆಸ್ ಮುಖಂಡ ಪ್ಲಲಾಗಟ್ಟೆ ಶೇಖರಪ್ಪ ಹೇಳಿದರು.

ಹಿರಿಯ ವ್ಯಂಗಚಿತ್ರಕಾರ ಎಚ್.ಬಿ.ಮಂಜುನಾಥ್ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ವಾಲ್ಮೀಕಿ ಭವನದವರೆಗೆ ಮೆರವಣಿಗೆ ನಡೆಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಕೆಂಚಪ್ಪ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಅಶೋಕ, ಎಸ್.ಟಿ. ಇಲಾಖೆ ಅಧಿಕಾರಿ ರಾಘವೇಂದ್ರ, ಪಿ.ಆರ್.ಇ.ಡಿ. ಎಇಇ ಶಿವಮೂರ್ತಿ, ಸಿಡಿಪಿಒ ಬೀರೇಂದ್ರಕುಮಾರ್, ಡಿಎಸ್‌ಎಸ್‌ನ ಕುಬೇಂದ್ರಪ್ಪ, ಸಿಆರ್‌ಪಿ ಆಂಜನೇಯ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.