
ಜಗಳೂರು: ತಾಲ್ಲೂಕಿನ ಬಸವನಕೋಟೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮನರೇಗಾ ಯೋಜನೆಯಡಿ ₹6.90 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.
ಬಸವನಕೋಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಟದ ಮೈದಾನ ಅಭಿವೃದ್ಧಿ, ಸಿದ್ದಯ್ಯನಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಾಂಪೌಂಡ್ ನಿರ್ಮಾಣ, ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ, ನಮ್ಮಹೊಲ–ರಸ್ತೆ, ಬಾಕ್ಸ್ ಚರಂಡಿ, ಚೆಕ್ ಡ್ಯಾಂ ನಿರ್ಮಾಣ, ಸ್ಮಶಾನ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಆನ್‌ಲೈನ್ ಅನುಮೋದನೆ ದೊರೆತಿರುವ ಕುರಿತು ಪಿಡಿಒ ರಾಘವೇಂದ್ರ ಅವರು ಸಭೆಗೆ ಮಾಹಿತಿ ನೀಡಿದರು.
‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಹಳ್ಳಿಗಳ ಅಭಿವೃದ್ಧಿಗೆ ಸದಸ್ಯರು ಸಹಕರಿಸಬೇಕು. ಚರಂಡಿ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಯನ್ನು ಮನರೇಗಾ ಯೋಜನೆ ಸಮರ್ಪಕ ಜಾರಿಗೊಳಿಸಲು ಆದ್ಯತೆ ನೀಡಲಾಗುವುದು’ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮರಿಯಮ್ಮ ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಶರಣಪ್ಪ, ಜ್ಯೋತಿಲಿಂಗಪ್ಪ, ರೇವಣಸಿದ್ದಪ್ಪ, ಲಲಿತಮ್ಮ, ಮಂಜಮ್ಮ, ಯಲ್ಲಮ್ಮ, ದೇವರಾಜ್, ರಾಜಪ್ಪ, ಬಿಲ್ ಕಲೆಕ್ಟರ್ ಕರಿಬಸಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.