
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಜಗಳೂರು: ಸಾಲ ಬಾಧೆ ತಾಳಲಾರದೆ 8 ದಿನದ ಹಿಂದೆ ವಿಷ ಸೇವಿಸಿದ್ದ ತಾಲ್ಲೂಕಿನ ಮಾಕುಂಟೆ ಗ್ರಾಮದ ರೈತ ನಿಂಗಪ್ಪ (52) ಮೃತಪಟ್ಟಿದ್ದಾರೆ.
ನಿಂಗಪ್ಪ ಕೃಷಿ ಉದ್ದೇಶಕ್ಕಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಅದರ ಹೊರೆಯಿಂದ ಬೇಸತ್ತು ಜ. 16 ರಂದು ಬೆಳಿಗ್ಗೆ ಜಮೀನಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.