ADVERTISEMENT

ಕಲುಷಿತ ಆಹಾರ ಸೇವನೆ: 9 ಮಕ್ಕಳು ಸೇರಿ 40 ಜನ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 4:02 IST
Last Updated 8 ಜೂನ್ 2022, 4:02 IST
ಮದುವೆ ಮನೆಯಲ್ಲಿ ಪಾಯಸ ಸೇವಿಸಿ ಅಸ್ವಸ್ಥರಾಗಿದ್ದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
ಮದುವೆ ಮನೆಯಲ್ಲಿ ಪಾಯಸ ಸೇವಿಸಿ ಅಸ್ವಸ್ಥರಾಗಿದ್ದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.   

ಜಗಳೂರು: ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ಮದುವೆ ಮನೆಯಲ್ಲಿ ಸೋಮವಾರ ರಾತ್ರಿ ಪಾಯಸ ಸೇವಿಸಿದ್ದ 9 ಮಕ್ಕಳು ಸೇರಿ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.

ಮದುವೆ ಸಮಾರಂಭದಲ್ಲಿ ಕೊನೆಯ ಪಂಕ್ತಿಯಲ್ಲಿ ಪಾಯಸ ಸೇವಿಸಿದ 40 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ.
ಅಸ್ವಸ್ಥರನ್ನು ಕೂಡಲೇ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

‘ಕಲುಷಿತ ಪಾಯಸ ಸೇವಿಸಿ ಅಸ್ವಸ್ಥರಾಗಿದ್ದ ಎಲ್ಲರಿಗೂ ತುರ್ತು ಚಿಕಿತ್ಸೆ ‌ನೀಡಿದ್ದು, ಬಹುತೇಕರು ಗುಣಮುಖರಾಗಿದ್ದಾರೆ. ಅಸ್ವಸ್ಥ
ರಲ್ಲಿ 9 ಮಕ್ಕಳು ಸೇರಿದ್ದಾರೆ. ಕೆಲವರು ಇನ್ನೂ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಅಪಾಯವಿಲ್ಲ’ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ನೀರಜ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.