
ಪ್ರಜಾವಾಣಿ ವಾರ್ತೆ
ಜಗಳೂರು: ಜಗಳೂರು –ತುರುವನೂರು ಮಾರ್ಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅಕ್ವಾಡೆಕ್ಟ್ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ, ಜಗಳೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಫೆ.22ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಎಇಇ ಮಲ್ಲಿಕಾರ್ಜುನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ನಿರಂತರ ಜ್ಯೋತಿ ಮತ್ತು ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.