ADVERTISEMENT

ಜಗಳೂರು | 15 ಪ.ಪಂ. ಮಳಿಗೆಗಳ ನೆಲಸಮ: ರಸ್ತೆ ವಿಸ್ತರಣಾ ಕಾರ್ಯ ಚುರುಕು

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 7:04 IST
Last Updated 16 ಜುಲೈ 2025, 7:04 IST
ಜಗಳೂರಿನಲ್ಲಿ ಮಂಗಳವಾರ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲಾಯಿತು 
ಜಗಳೂರಿನಲ್ಲಿ ಮಂಗಳವಾರ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲಾಯಿತು    

ಜಗಳೂರು: ಪಟ್ಟಣದ ಮಧ್ಯಭಾಗದಲ್ಲಿ ಹಾದುಹೋಗುವ ಮಲ್ಪೆ–ಮೊಳಕಾಲ್ಮುರು ರಾಜ್ಯ ಹೆದ್ದಾರಿ ವಿಸ್ತರಣೆ ಅಂಗವಾಗಿ ಪಟ್ಟಣ ಪಂಚಾಯಿತಿಗೆ ಸೇರಿದ 15 ವಾಣಿಜ್ಯ ಮಳಿಗೆಗಳನ್ನು ಮಂಗಳವಾರ ನೆಲಸಮಗೊಳಿಸಲಾಯಿತು.

ತಾಲ್ಲೂಕು ಆಡಳಿತದಿಂದ ರಸ್ತೆಯ ಮಧ್ಯಭಾಗದಿಂದ ಇಕ್ಕೆಲಗಳಲ್ಲಿ ಒಟ್ಟು 69 ಅಡಿ ವಿಸ್ತರಣೆಗೆ ಮಾರ್ಕ್ ಮಾಡಲಾಗಿತ್ತು. ರಸ್ತೆ ವಿಸ್ತರಣೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿದ್ದವು. 

ಶಾಸಕ ಬಿ. ದೇವೇಂದ್ರಪ್ಪ ಮತ್ತು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಶೀಘ್ರವೇ  ವಾಣಿಜ್ಯ ಮಳಿಗೆಗಳನ್ನು ನೆಲಸಮಗೊಳಿಸುವುದಾಗಿ ಭರವಸೆ ನೀಡಿದ್ದರು.

ADVERTISEMENT

ಮಂಗಳವಾರ ನಸುಕಿನಲ್ಲಿ ಜೆಸಿಬಿ ಯಂತ್ರಗಳ ಆರ್ಭಟದೊಂದಿಗೆ ಆರಂಭವಾದ ಕಾರ್ಯಾಚರಣೆ ಸಂಜೆಯವರೆಗೆ ನಡೆಯಿತು. ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ, ಲೋಕೋಪಯೋಗಿ ಇಲಾಖೆ ಎಇಇ ನಾಗರಾಜ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಅವರು ಸ್ಥಳದಲ್ಲೇ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.