
ದಾವಣಗೆರೆ: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಕ್ಕೂ ಹೆಚ್ಚು ಇತಿಹಾಸವಿದೆ. ಪಂಪ, ರನ್ನ, ಪೊನ್ನ ಸೇರಿದಂತೆ ಜೈನ ಕವಿಗಳ ಕೊಡುಗೆ ಅಪಾರವಾಗಿದೆ ಎಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಜಿ. ಯಲ್ಲಪ್ಪ ಅಭಿಪ್ರಾಯಪಟ್ಟರು.
ಇಲ್ಲಿನ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
‘ಪ್ರತಿಯೊಬ್ಬರೂ ನಿತ್ಯ ಕನ್ನಡವನ್ನು ಬಳಸಬೇಕು. ಈ ಮೂಲಕ ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.
ಚಿತ್ರನಟ ಪೃಥ್ವಿ ಶಾಮನೂರು, ‘ಕನ್ನಡವನ್ನು ದಿನನಿತ್ಯದ ಬದುಕಿನಲ್ಲಿ ಬಳಕೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ಹೇಳಿದರು.
ಪ್ರಾಂಶುಪಾಲ ಗಣೇಶ್ ಡಿ.ಬಿ., ‘ಕನ್ನಡಕ್ಕೆ ಅತ್ಯಂತ ಪುರಾತನ ಇತಿಹಾಸವಿದೆ. ವಿಶ್ವದ ಅನೇಕ ದೇಶಗಳು ಮಾತೃಭಾಷೆಗೆ ಆದ್ಯತೆ ನೀಡುತ್ತವೆ. ನಾವೂ ಕೂಡ ಕನ್ನಡವನ್ನು ಪ್ರತಿದಿನ ಬಳಸುವ ಮೂಲಕ ಭಾಷೆಯ ಸಂರಕ್ಷಣೆ ಮತ್ತು ವಿಕಸನಕ್ಕೆ ಕೊಡುಗೆ ನೀಡಬೇಕು’ ಎಂದರು.
ಪ್ರಾಧ್ಯಾಪಕರಾದ ಪ್ರಕಾಶ ಕೆ.ಬಿ, ಸವಿತಾ ಮಮಡಾಪುರ, ರಾಹುಲ್ ಪಾಟೀಲ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.