ADVERTISEMENT

ಏ. 11ರಂದು 9 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 3:42 IST
Last Updated 8 ಏಪ್ರಿಲ್ 2021, 3:42 IST

ದಾವಣಗೆರೆ: ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು ಏಪ್ರಿಲ್ 11ರಂದು ನಗರದ 9 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪರೀಕ್ಷೆಗೆ ಸಂಬಂಧಿಸಿದ ಸೂಚನೆ, ಪ್ರವೇಶ ಪತ್ರ ಹಾಗೂ ಇನ್ನಿತರ ಮಾಹಿತಿಯನ್ನು ಕೆ-ಸೆಟ್ ಅಂತರ್ಜಾಲ (http:/kset.uni.mysore.ac.in) ಇಲ್ಲಿಗೆ ಕಳುಹಿಸಲಾಗಿದೆ. ಅಭ್ಯರ್ಥಿಗಳು ಪ್ರವೇಶಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು, ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪರೀಕ್ಷೆಗೆ ಬರುವಾಗ ತರಬೇಕು. ಪ್ರವೇಶಪತ್ರವಿಲ್ಲದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ದಾವಣಗೆರೆ ವಿಶ್ವವಿದ್ಯಾಲಯದ ನೋಡಲ್ ಅಧಿಕಾರಿ ಪ್ರೊ.ಜೆ.ಕೆ. ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮುಂಚೆ ಹಾಜರಿರಬೇಕು, ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಬಾರದು ಎಂದು ಸೂಚಿಸಿದ್ದಾರೆ.

ADVERTISEMENT

ಪರೀಕ್ಷಾ ಕೇಂದ್ರಗಳು

*ಎಸ್‍ಬಿಸಿ ಮಹಿಳಾ ಪ್ರಥಮ ದರ್ಜೆ ಕಾಲೇಜು

*ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು

* ಬಾಪೂಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು

*ಸರ್ಕಾರಿ ಪ್ರಥಮ ದರ್ಜೆ ಕಾಲೇಜು

*ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜು

*ಎ.ವಿ. ಕಮಲಮ್ಮ ಮಹಿಳಾ ಕಾಲೇಜು

* ಜಿ.ಎಂ. ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ

* ಜಿ.ಎಂ.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜು

* ದವನ್ ನೂತನ್ ಅಲಯನ್ಸ್ ನೂತನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.