ದಾವಣಗೆರೆ: ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಹೇಳಿಕೆ ಖಂಡನೀಯ. ಇದಕ್ಕಾಗಿ ಅವರು ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸಬೇಕು’ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಒತ್ತಾಯಿಸಿದರು.
‘ಕರ್ನಾಟಕ ಹಾಗೂ ಕನ್ನಡದ ಬಗೆಗೆ ಕಮಲ್ ಆಡಿರುವ ಮಾತು ಬೇಜವಾಬ್ದಾರಿಯಿಂದ ಕೂಡಿದೆ. ಈ ನುಡಿ ಸ್ವೀಕಾರಾರ್ಹವಲ್ಲ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
‘ಸಮಾಜದಲ್ಲಿ ಒಡಕು ಸೃಷ್ಟಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಹುನ್ನಾರಗಳು ನಡೆಯುತ್ತಿವೆ. ರಾಜಕೀಯ ಹಿತಾಸಕ್ತಿಗಾಗಿ ಗಲಭೆಗಳಾಗುತ್ತಿವೆ. ಇಂತಹ ಗಲಭೆಯ ಆರೋಪ ಎದುರಿಸುತ್ತಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ತಪ್ಪು ಮಾಡಿದವರು ಶಿಕ್ಷೆ ಎದುರಿಸಬೇಕು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.