ದಾವಣಗೆರೆ: ‘ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಶನಿವಾರ ಹೇಳಿದರು.
‘ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿ ಆಗುತ್ತಾರಾ’ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು, ‘ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿರುವ ವಿಚಾರ’ ಎಂದು ಹೇಳಿದರು.
‘ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.