
ದಾವಣಗೆರೆ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬದಲಾವಣೆ ಮಾಡಲಾಗುತ್ತದೆಯೇ ಎಂಬುದನ್ನು ಪಕ್ಷದ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಒತ್ತಾಯಿಸಿದರು.
‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ. ಪಕ್ಷದ ಹೈಕಮಾಂಡ್ ಕೂಡಲೇ ಮಧ್ಯಪ್ರವೇಶ ಮಾಡುವುದು ಒಳಿತು. ಡಿ.ಕೆ. ಶಿವಕುಮಾರ್ ಅಥವಾ ಪಕ್ಷದ ಸಾಮಾನ್ಯ ಕಾರ್ಯಕರ್ತರೊಬ್ಬರನ್ನು ಮುಖ್ಯಮಂತ್ರಿ ಮಾಡಿದರೂ ಒಪ್ಪಿಕೊಳ್ಳುತ್ತೇವೆ’ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಡಿ.ಕೆ. ಶಿವಕುಮಾರ್ ಎಷ್ಟು ಸಮರ್ಥರು ಎಂಬುದು ವಿಧಾನಸಭಾ ಚುನಾವಣೆಯಲ್ಲಿ ನಿರೂಪಿತವಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದ 136 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ್ದು ಹೈಕಮಾಂಡ್ ಗಮನದಲ್ಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.