ADVERTISEMENT

ದಾವಣಗೆರೆಯಲ್ಲಿ ಸಂಭ್ರಮ ಕರ್ನಾಟಕ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 7:04 IST
Last Updated 1 ನವೆಂಬರ್ 2021, 7:04 IST
   

ದಾವಣಗೆರೆ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಜ್ರಮ ನಡೆಯಿತು.

ಹೈಸ್ಕೂಲ್ ಮೈದಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಿತು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಧ್ವಜಾರೋಹಣ ಮಾಡಿದರು.

ADVERTISEMENT

ಆಕರ್ಷಕ ಪಥಸಂಚಲನ ನಡೆಯಿತು. 14 ಶಿಕ್ಷಕರನ್ನು ಗೌರವಿಸಲಾಯಿತು. 51 ಮಂದಿ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.