ಹೊನ್ನಾಳಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ತಾಲ್ಲೂಕಿನ ಬಹುತೇಕ ಎಲ್ಲಾ ಸರ್ಕಾರಿ, ವಸತಿ ಶಾಲೆ ಹಾಗೂ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಪರೀಕ್ಷೆಗೆ ಹಾಜರಾದ 2723 ವಿದ್ಯಾರ್ಥಿಗಳ ಪೈಕಿ 1,847 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 876 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ ಎಂದು ಬಿಇಒ ಕೆ.ಟಿ. ನಿಂಗಪ್ಪ ಮಾಹಿತಿ ನೀಡಿದ್ದಾರೆ.
ಪಟ್ಟಣದ ಸ್ಟೆಲ್ಲಾ ಮಾರೀಸ್ ಶಾಲೆಯ ಸಾನಿಕಾ ಎಂ.ವಿ. 619 ಅಂಕ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಸಿಂಗಟಗೆರೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸೌಮ್ಯಾ 617 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯ ಭಾರ್ಗವಿ ಎನ್. 612 ಅಂಕ, ವಿಶ್ವಾಸ್ ಕಲ್ಮನೆ 609 ಅಂಕ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.