ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಹಾಗೂ ರಾಜ್ಯದ ಮುಖ್ಯಮಂತ್ರಿ ಆಗುವ ಅರ್ಹತೆ ನನಗೂ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
‘ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹಪ್ರವೇಶವಿದೆ. ಅದಕ್ಕೆ ದೆಹಲಿಗೆ ಹೋಗುತ್ತಿದ್ದೇವೆ. ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದೇವೆ. ವರಿಷ್ಠರು ಸಿಗುತ್ತಾರೊ ಇಲ್ಲವೊ ಎಂಬುದನ್ನು ನಿಮಗೆ (ಮಾಧ್ಯಮ) ಏಕೆ ಹೇಳಲಿ’ ಎಂದು ಹರಿಹಾಯ್ದರು.
‘ಪಕ್ಷದ ಒಡೆದ ಮನಸುಗಳನ್ನು ಒಂದುಗೂಡಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಯಾತ್ರೆ ಕೈಗೊಳ್ಳುವ ನಿರ್ಧಾರವನ್ನು ಸ್ವಾಗತಿಸುವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.