ದಾವಣಗೆರೆ: ಕನ್ನಡದ ಮೇರು ಸಾಹಿತಿಗಳ ಸಾಲಿನಲ್ಲಿ ಗುರುತಿಸಿಕೊಂಡ ಕವಿ ಎಚ್.ಎಸ್. ವೆಂಕಟೇಶಮೂರ್ತಿ ಅವರು ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯವರು ಎಂಬುದು ಹೆಮ್ಮೆಯ ಸಂಗತಿ. ಗ್ರಾಮದಲ್ಲಿರುವ ಅವರ ಮನೆಯನ್ನು ಸರ್ಕಾರ ಸ್ಮಾರಕವಾಗಿ ರೂಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ. ವಾಮದೇವಪ್ಪ ಮನವಿ ಮಾಡಿದರು.
ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಕವಿ ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ಶುಕ್ರವಾರ ಏರ್ಪಡಿಸಿದ್ದ ನುಡಿನಮನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ವೆಂಕಟೇಶಮೂರ್ತಿ ಅವರು 6 ದಶಕಗಳಿಂದ ನಿರಂತರವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಕನ್ನಡ ನಾಡಿನ ಮೇರು ಸಾಹಿತಿಗಳ ಪಂಕ್ತಿಯಲ್ಲಿ ಗುರುತಿಸಿಕೊಂಡಿದ್ದರು. ಅವರು ರಚಿಸಿದ ಭಾವಗೀತೆಗಳು ಜನಮನದಲ್ಲಿ ವಿಶೇಷ ಸ್ಥಾನಪಡೆದಿವೆ. ಹಾಗಾಗಿಯೇ ಅವರು ಭಾವಗೀತೆಗಳ ಕವಿ ಎಂದೇ ಹೆಸರಾಗಿದ್ದಾರೆ’ ಎಂದು ಬಣ್ಣಿಸಿದರು.
‘ಬುದ್ಧ ಚರಣ’ವೆಂಬ ಮಹಾಕಾವ್ಯವನ್ನು ಒಳಗೊಂಡಂತೆ ಸಾಹಿತ್ಯದ ಬಹುತೇಕ ಎಲ್ಲ ಪ್ರಕಾರಗಳಲ್ಲಿ ಮೌಲಿಕ ಹಾಗೂ ಚಿರಕಾಲ ಬಾಳುವಂತಹ ಕೃತಿಗಳನ್ನು ರಚಿಸಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಸಾಹಿತ್ಯ ಚಿರಸ್ಥಾಯಿಯಾಗಿ ಉಳಿಯಲಿ’ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮತಿ ಜಯಪ್ಪ, ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯರಿ, ಕಾರ್ಯದರ್ಶಿಗಳಾದ ಬಿ.ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ, ಸಂಘಟನಾ ಕಾರ್ಯದರ್ಶಿ ಸಿ.ಜಿ. ಜಗದೀಶ್ ಕೂಲಂಬಿ ಹಾಜರಿದ್ದರು.
ವೆಂಕಟೇಶಮೂರ್ತಿ ಅವರು ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಹಲವು ಕೃತಿಗಳನ್ನು ರಚಿಸಿದ್ದಾರೆ. ಈ ಕೃತಿಗಳನ್ನು ಓದುವ ಮೂಲಕ ಅವರನ್ನು ಜೀವಂತವಾಗಿ ಇಟ್ಟುಕೊಳ್ಳಬೇಕು ಹೋರಾಟಗಾರತೇಜಸ್ವಿ ಪಟೇಲ್ ರೈತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.