ADVERTISEMENT

ಹೊನ್ನಾಳಿ| ಕೃಷಿಭಾಗ್ಯ: 50 ಕೃಷಿ ಹೊಂಡ ನಿರ್ಮಾಣದ ಗುರಿ

​ಪ್ರಜಾವಾಣಿ ವಾರ್ತೆ
Published 22 ಮೇ 2025, 16:06 IST
Last Updated 22 ಮೇ 2025, 16:06 IST
ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದ ರೈತರೊಬ್ಬರ ಹೊಲದಲ್ಲಿ ಕೃಷಿಭಾಗ್ಯ ಯೋಜನೆಯಡಿ ನಿರ್ಮಿಸಿದ್ದ ಕೃಷಿ ಹೊಂಡ ಮಳೆನೀರಿನಿಂದ ತುಂಬಿರುವುದು
ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದ ರೈತರೊಬ್ಬರ ಹೊಲದಲ್ಲಿ ಕೃಷಿಭಾಗ್ಯ ಯೋಜನೆಯಡಿ ನಿರ್ಮಿಸಿದ್ದ ಕೃಷಿ ಹೊಂಡ ಮಳೆನೀರಿನಿಂದ ತುಂಬಿರುವುದು   

ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಮುಂಗಾರು ಆರಂಭಕ್ಕೂ ಮುನ್ನ ಧಾರಾಕಾರವಾಗಿ ಮಳೆ ಸುರಿದಿದೆ. 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಲಾದ ಕೃಷಿ ಹೊಂಡಗಳು ಬಹುತೇಕ ಭರ್ತಿಯಾಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್ ಹೇಳಿದರು.

ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಈವರೆಗೆ ಕ್ರಮವಾಗಿ 146 ಮಿ.ಮೀ ಹಾಗೂ 109 ಮಿ.ಮೀ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ 50 ಕೃಷಿ ಹೊಂಡಗಳನ್ನು ನಿರ್ಮಿಸುವ ಗುರಿ ಇದ್ದು, ಯೋಜನೆಯನ್ನು ಸರ್ಮಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ. ಕೃಷಿ ಇಲಾಖೆಯಿಂದ ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ, ಕೀಟನಾಶಕ ಮತ್ತು ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ADVERTISEMENT

ಅವಳಿ ತಾಲ್ಲೂಕುಗಳ ಕಸಬಾ, ಸಾಸ್ವೇಹಳ್ಳಿ, ಕುಂದೂರು, ನ್ಯಾಮತಿ, ಚೀಲೂರು ಮತ್ತು ಗೋವಿನಕೊವಿ ರೈತ ಸಂಪರ್ಕ ಕೇಂದ್ರಗಳಲ್ಲಿ ಸರ್ಕಾರದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬೇಕೆಂದು ಅವರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.