ADVERTISEMENT

ನಿಯಮ ಉಲ್ಲಂಘನೆ: ಮೇಯರ್‌ ವಿರುದ್ಧ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 17:01 IST
Last Updated 9 ಜುಲೈ 2020, 17:01 IST

ದಾವಣಗೆರೆ: ಲಾಕ್‌ಡೌನ್ ನಡುವೆಯೂ ಮಾಸ್ಕ್ ಇಲ್ಲದೇ, ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡ ಮೇಯರ್ ಬಿ.ಜಿ. ಅಜಯಕುಮಾರ್ ಅವರ ವಿರುದ್ಧ ತಹಶೀಲ್ದಾರ್ ಎನ್‌.ಬಿ. ಗಿರೀಶ್ ಸಲ್ಲಿಸಿರುವ ದೂರಿನ ಸಂಬಂಧಬಡಾವಣೆ ಪೊಲೀಸರು ಒಂದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ವರದಿ ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ನ್ಯಾಯಾಲಯ ಮುಂದಿನ ನಿರ್ದೇಶನ ಎದುರು ನೋಡುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಹೊರಡಿಸಿದ್ದರೂ ಜನರನ್ನು ಗುಂಪುಗೂಡಿಸಿಕೊಂಡು ಜನ್ಮದಿನ ಆಚರಿಸುವ ಮೂಲಕ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಮೇಯರ್‌ ಉಲ್ಲಂಘಿಸಿದ್ದರು. ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದನ್ನು ವೀಕ್ಷಿಸಿ ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಬಡಾವಣೆ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.