ADVERTISEMENT

ವಕೀಲರ ಸಂರಕ್ಷಣೆ ಕಾಯ್ದೆಗಾಗಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 16:15 IST
Last Updated 1 ಮಾರ್ಚ್ 2021, 16:15 IST
ಹೊಸಪೇಟೆಯಲ್ಲಿ ವಕೀಲ ತಾರೇಹಳ್ಳಿ ವೆಂಕಟೇಶ್‌ ಹತ್ಯೆ ಮಾಡಿರುವುದನ್ನು ಖಂಡಿಸಿ ದಾವಣಗೆರೆಯಲ್ಲಿ ವಕೀಲರ ಸಂಘದ ಸದಸ್ಯರು ಪ್ರತಿಭಟಿಸಿದರು. –ಪ್ರಜಾವಾಣಿ ಚಿತ್ರ
ಹೊಸಪೇಟೆಯಲ್ಲಿ ವಕೀಲ ತಾರೇಹಳ್ಳಿ ವೆಂಕಟೇಶ್‌ ಹತ್ಯೆ ಮಾಡಿರುವುದನ್ನು ಖಂಡಿಸಿ ದಾವಣಗೆರೆಯಲ್ಲಿ ವಕೀಲರ ಸಂಘದ ಸದಸ್ಯರು ಪ್ರತಿಭಟಿಸಿದರು. –ಪ್ರಜಾವಾಣಿ ಚಿತ್ರ   

ದಾವಣಗೆರೆ: ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲೇ ವಕೀಲ ತಾರೇಹಳ್ಳಿ ವೆಂಕಟೇಶ್‌ ಅವರನ್ನು ಈಚೆಗೆ ಹತ್ಯೆ ಮಾಡಿರುವುದನ್ನು ಖಂಡಿಸಿ ದಾವಣಗೆರೆ ವಕೀಲರ ಸಂಘದ ಆಶ್ರಯದಲ್ಲಿ ಸೋಮವಾರ ನಗರದಲ್ಲಿ ವಕೀಲರು ಪ್ರತಿಭಟಿಸಿದರು.

ಮಧ್ಯಾಹ್ನ ನ್ಯಾಯಾಲಯದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟ ವಕೀಲರು ಪಿ.ಬಿ. ರಸ್ತೆಯ ಕೋರ್ಟ್‌ ಸರ್ಕಲ್‌ನಲ್ಲಿ ಕೆಲ ಕಾಲ ವಾಹನಗಳನ್ನು ತಡೆದು ಪ್ರತಿಭಟಿಸಿದರು. ತೆಲಂಗಾಣ ರಾಜ್ಯದಲ್ಲಿ ವಕೀಲ ದಂಪತಿಗಳಾದ ಗುಟ್ಟು ವಾಮನ್‌ರಾವ್‌ ಹಾಗೂ ಪಿ.ಬಿ.ನಾಗಮಣಿ ದಂಪತಿಯನ್ನು ನಡುರಸ್ತೆಯಲ್ಲೇ ಹತ್ಯೆ ಮಾಡಿರುವ ಘಟನೆಯನ್ನೂ ಖಂಡಿಸಿದರು. ಬಳಿಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

‘ನಾಗರಿಕರ ಮಾನ, ಆಸ್ತಿ, ಜೀವ ರಕ್ಷಣೆ ಮಾಡುವ ಕೆಲಸದಲ್ಲಿ ನಾವು ತೊಡಗಿಕೊಂಡಿದ್ದೇವೆ. ನಮ್ಮನ್ನು ರಕ್ಷಿಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ನಮಗೆ ಕಾನೂನಿನ ರಕ್ಷಣೆ ಇಲ್ಲದಂತಾಗಿದೆ. ಹೀಗಾಗಿ ವಕೀಲರ ರಕ್ಷಣೆಗಾಗಿ ವಕೀಲರ ಸಂರಕ್ಷಣೆ ಕಾಯ್ದೆಯನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ADVERTISEMENT

ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜು, ಕಾರ್ಯದರ್ಶಿ ಲೋಕಿಕೆರೆ ಎಚ್‌.ಪ್ರದೀಪ್‌, ಸಂಘದ ಪದಾಧಿಕಾರಿಗಳುಹಾಗೂ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.