ADVERTISEMENT

ಬೇಡಿಕೆ ಈಡೇರಿಕೆಗೆ ಉಪನ್ಯಾಸಕರ ಒತ್ತಾಯ

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 10:25 IST
Last Updated 29 ನವೆಂಬರ್ 2019, 10:25 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು   

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ಗುರುವಾರ ಧರಣಿ ನಡೆಸಲಾಯಿತು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಿಗ್ಗೆಯಿಂದ ಸಂಜೆ 5ರ ವರೆಗೆ ಪ್ರತಿಭಟನೆ ನಡೆಸಿದ ಉಪನ್ಯಾಸಕರು ಸರ್ಕಾರದ
ವಿರುದ್ಧ ಘೋಷಣೆ ಕೂಗಿದರು.10 ವರ್ಷಗಳಿಂದ ಉಪನ್ಯಾಸಕರ ಸಮಸ್ಯೆ ಸಂಬಂಧ ಹಲವು ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಶೀಘ್ರ 21 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.ಉಪನ್ಯಾಸಕರಿಗೆ ಎರಡನೇ ಹೆಚ್ಚುವರಿ ವೇತನ ಬಡ್ತಿ ಮಂಜೂರು ಮಾಡಬೇಕು. ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿದ ಉಪನ್ಯಾಸಕರಿಗೆ 10, 15, 20, 25 ವರ್ಷಗಳ ಕಾಲಮಿತಿ ವೇತನ ಬಡ್ತಿಯನ್ನು ಕೂಡಲೇ ಮಂಜೂರು ಮಾಡಬೇಕು. ಕಾರ್ಯಭಾರ ಸಂಬಂಧ ಉನ್ನತ ಮಟ್ಟದ ಪರಿಷತ್‌ ಸಮಿತಿ ರಚಿಸಬೇಕು. ಅಲ್ಲಿಯವರೆಗೆ ಉಪನ್ಯಾಸಕರಿಗೆ 16 ಗಂಟೆಗಳ ಬೋಧನಾ ಅವಧಿ ಮುಂದುವರಿಸಬೇಕು. ನೆಟ್‌, ಸ್ಲೆಟ್‌, ಪಿಎಚ್‌.ಡಿ ಮಾಡಿದವರಿಗೆ ಪದವಿ ಕಾಲೇಜುಗಳಿಗೆ ಬಡ್ತಿ ನೀಡಬೇಕು. ಅನುದಾನಿತ ಪಿಯು ಕಾಲೇಜುಗಳ ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸಬೇಕು. ಬಿಇಡಿ ಪೂರೈಸಿ ಮರಳಿದವರಿಗೆ ವೇತನ ಸಹಿತ ರಜೆ ಎಂದು ಪರಿಗಣಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಜಿಲ್ಲಾ ಘಟಕದ ಅಧ್ಯಕ್ಷ ಸಿ.ಬಿ. ರವಿ, ಕಾರ್ಯಾಧ್ಯಕ್ಷ ಮಂಜುನಾಥ ಐ., ಪ್ರಧಾನ ಕಾರ್ಯದರ್ಶಿ ಎಚ್‌.ಶೇಖರಪ್ಪ, ಖಜಾಂಚಿ ಎಚ್‌.ಎಸ್‌. ತಿಪ್ಪೇಸ್ವಾಮಿ, ದ್ರೋಣಾನಾಯ್ಕ ಆರ್‌. ಸೇರಿ ವಿವಿಧ ತಾಲ್ಲೂಕುಗಳ 400ಕ್ಕೂ ಅಧಿಕ ಉಪನ್ಯಾಸಕರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.