ADVERTISEMENT

ಆರ್‌ಎಸ್‌ಎಸ್‌ ಕಂಡರೆ ಎಡಪಂಥಿಯರಿಗೆ ಭಯ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 7:47 IST
Last Updated 12 ಡಿಸೆಂಬರ್ 2020, 7:47 IST
   

ದಾವಣಗೆರೆ: ಕುರುಬರ ಎಸ್ಟಿ ಹೋರಾಟದಲ್ಲಿ ಆರ್‌ಎಸ್‌ಎಸ್‌ ಪಾತ್ರ ಇಲ್ಲ. ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೊರಾಟ ಇದು. ಅದರೂ ಎಡಪಂಥೀಯರು ಆರ್‌ಎಸ್‌ಎಸ್‌ ಪಾತ್ರ ಇದೆ ಎನ್ನುತ್ತಿದ್ದಾರೆ. ಅವರಿಗೆ ಆರ್‌ಎಸ್‌ಎಸ್‌ ಅಂದ್ರೆ ಭಯ. ಅದಕ್ಕೆ ಈ ಆರೋಪ ಮಾಡ್ತಿದ್ದಾರೆ ಎಂದು ಸಚಿವಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ನನ್ನಂಥ ಕೋಟ್ಯಂತರ ದೇಶಭಕ್ತರನ್ನು ಸೃಷ್ಟಿಸಿದ್ದು ಆರ್‌ಎಸ್‌ಎಸ್‌. ಕಾಮಾಲೆ ರೋಗದವರಿಗೆ ಎಲ್ಲವೂ ಹಳದಿ ಕಾಣುವಂತೆ ಇವರಿಗೆ ಎಲ್ಲದರಲ್ಲೂ ಆರ್‌ಎಸ್‌ಎಸ್‌ ಕಾಣುತ್ತದೆ ಎಂದು ಟೀಕಿಸಿದರು.

ಈ ಹೋರಾಟ ಪಕ್ಷಾತೀತವಾಗಿ ನಡೆಯುತ್ತಿದೆ. ನಾನು, ಎಚ್.ಎಂ. ರೇವಣ್ಣ, ಬಂಡೆಪ್ಪ ಕಾಶೆಂಪೂರ, ವಿಶ್ವನಾಥ್ ಹೀಗೆ ಎಲ್ಲ ಪಕ್ಷದವರು ಇದ್ದಾರೆ ಎಂದು ತಿಳಿಸಿದರು.

ADVERTISEMENT

ಸಿದ್ದರಾಮಯ್ಯ ಅವರ ಸಮ್ಮತಿ ಪಡೆದೇ ಹೋರಾಟಕ್ಕೆ ಇಳಿದಿದ್ದೇವೆ. ಸಿದ್ದರಾಮಯ್ಯ ಯಾವಾಗ ಬಂದರೂ ಸ್ವಾಗತಿಸುತ್ತೇವೆ ಎಂದು ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.