ಸಾಂದರ್ಭಿಕ ಚಿತ್ರ
ಎ.ಐ ಚಿತ್ರ
ದಾವಣಗೆರೆ: ಹರಿಹರ ತಾಲ್ಲೂಕಿನ ಹೊಳೆಸಿರಿಗೆರೆ ಕ್ರಾಸ್ ಬಳಿಯ ಅಡಿಕೆ ತೋಟದಲ್ಲಿ ಬೀಡುಬಿಟ್ಟಿದ್ದ ಕುರಿ ಹಿಂಡಿನ ಮೇಲೆ ಮಂಗಳವಾರ ತಡರಾತ್ರಿ ಚಿರತೆಯೊಂದು ದಾಳಿ ನಡೆಸಿದ ಪರಿಣಾಮ 27 ಕುರಿ ಮೃತಪಟ್ಟಿವೆ.
ಕುರಿಗಳು ಚಿಕ್ಕೋಡಿ ತಾಲ್ಲೂಕಿನ ಸದಲಗ ಗ್ರಾಮದ ಸೋಮಣ್ಣ ಅವರಿಗೆ ಸೇರಿದವು. ಹೊಳೆಸಿರಿಗೆರೆ ಕ್ರಾಸ್ ಸಮೀಪದ ಯಲವಟ್ಟಿ ರಸ್ತೆಯ ತೋಟವೊಂದರಲ್ಲಿ ಕುರಿಗಳೊಂದಿಗೆ ಬೀಡು ಬಿಟ್ಟಿದ್ದರು.
ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿದೆ. ಕುರಿಗಳು ಎಲ್ಲೆಂದರಲ್ಲಿ ಸತ್ತು ಬಿದ್ದಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ, ಚಿರತೆ ಸೆರೆಗೆ ಮುಂದಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.