
ಚಿರತೆ
ಹರಿಹರ: ನಗರಕ್ಕೆ ಚಿರತೆ ನುಗ್ಗಿದೆ ಎಂಬುದಾಗಿ ಬಿಂಬಿಸುವ ನಕಲಿ ಚಿತ್ರ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಗರದ ಜನತೆ ಹಾಗೂ ಅಧಿಕಾರಿಗಳ ನಿದ್ದೆಗೆಡಿಸಿದೆ.
ಮಂಗಳವಾರ ರಾತ್ರಿ ನಗರದ ಕಿರ್ಲೋಸ್ಕರ್ ಸ್ಟಾಫ್ ಕಾಲೊನಿಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಅನುಮಾನ ಮೂಡಿತ್ತು. ಸ್ಥಳಕ್ಕೆ ಶಾಸಕ ಬಿ.ಪಿ.ಹರೀಶ್, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಸಿ.ಸಿ.ಟಿ.ವಿ ಕ್ಯಾಮರಾ ದೃಶ್ಯ ಪರಿಶೀಲನೆ ಮಾಡಿದ್ದರು. ಆದರೆ ಖಚಿತ ಸಾಕ್ಷ್ಯ ಸಿಕ್ಕಿರಲಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಬೋನು ಅಳವಡಿಸಿ, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಓಡಾಡಲು ಸಲಹೆ ನೀಡಿದ್ದರು.
ಈ ನಡುವೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಕೆ ಮಾಡಿ, ಚಿರತೆ ಮನೆಯೊಂದರ ಅಂಗಳದಲ್ಲಿ ಸಂಚರಿಸಿದಂತೆ, ಧುಮುಕಿದಂತೆ ಕಾಣುವ ಚಿತ್ರ ಹಾಗೂ ವಿಡಿಯೊಗಳನ್ನು ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಪ್ರವೃತ್ತಿ ಹೆಚ್ಚಾಗಿದೆ. ಇಂತಹ ವ್ಯಕ್ತಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದೇವೆ ಎಂದು ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.