ADVERTISEMENT

ಚನ್ನಗಿರಿಯಲ್ಲಿ ಚಿರತೆ ಸೆರೆ: ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 7:39 IST
Last Updated 30 ಆಗಸ್ಟ್ 2021, 7:39 IST
ಸೆರೆಯಾದ ಚಿರತೆ ಕೆಂಗಣ್ಣಿನಿಂದ ಕೆಕ್ಕರಿಸಿ ನೋಡಿತು
ಸೆರೆಯಾದ ಚಿರತೆ ಕೆಂಗಣ್ಣಿನಿಂದ ಕೆಕ್ಕರಿಸಿ ನೋಡಿತು   

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕು ದಾಗಿನಕಟ್ಟೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. 4 ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಭಾನುವಾರ ರಾತ್ರಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಂಡು ಭಯಭೀತರಾಗಿದ್ದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಅರಣ್ಯ ಇಲಾಖೆಯ 20 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.