ADVERTISEMENT

ಹಿರಿಯ ಸಚಿವರು ಸ್ಥಾನ ತ್ಯಜಿಸಲಿ: ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 4:43 IST
Last Updated 18 ಜುಲೈ 2022, 4:43 IST
ಎಂ.ಪಿ ರೇಣುಕಾಚಾರ್ಯ
ಎಂ.ಪಿ ರೇಣುಕಾಚಾರ್ಯ    

ಹೊನ್ನಾಳಿ: ಸಚಿವ ಸಂಪುಟದಲ್ಲಿ ಹಿರಿಯ ಸಚಿವರು ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳಬಾರದು. ಅವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.

‘ಹಿರಿಯ ಸಚಿವರು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಒತ್ತಾಯಿಸುತ್ತೇನೆ. ಯಡಿಯೂರಪ್ಪ ಅವರೇ ತಮ್ಮ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಅವರಂತೆ ಎಲ್ಲರೂ ತ್ಯಾಗದ ಮನೋಭಾವನೆ ಬೆಳೆಸಿಕೊಳ್ಳಬೇಕು. ಸಚಿವನಾಗಲುನನಗೂ ಅರ್ಹತೆ ಇದೆ. ಈ ಹಿಂದೆ ಸಚಿವನಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ’ ಎಂದು ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಭಾನುವಾರ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.

‘ನಮ್ಮ ಸರ್ಕಾರದ ಸಚಿವರು ವಿಧಾನಸೌಧದ ಮೂರನೇ ಮಹಡಿಗೆ ಮಾತ್ರ ಸೀಮಿತವಾಗಬಾರದು. ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತದೆ. ಇನ್ನಾದರೂ ಅವರು ವಿಧಾನಸೌಧ ಬಿಟ್ಟು ಹೊರಬಂದು ಜನರ ಕೆಲಸ ಮಾಡಬೇಕು’ ಎಂದು ಚಾಟಿ ಬೀಸಿದರು.

ADVERTISEMENT

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಒಂದು ವರ್ಷ ಪೂರೈಸುತ್ತಿದ್ದು, ರಾಜ್ಯ ಸರ್ಕಾರದ ಸಾಧನೆ ತಿಳಿಸಲು ಸಾಧನಾ ಸಮಾವೇಶ ಮಾಡುತ್ತಿದ್ದೇವೆ. ಇದು ವ್ಯಕ್ತಿ ಪೂಜೆಯಲ್ಲ. ಬದಲಾಗಿ ಬಿಜೆಪಿ ಪೂಜೆ’ ಎಂದರು.

‘ಕಾಂಗ್ರೆಸ್‍ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಸಂಘರ್ಷ ನಡೆಯುತ್ತಿದೆ. ಎಂದರು.

‘ಬಿಜೆಪಿಯಲ್ಲಿ ಯಾವುದೇ ಕಾರಣಕ್ಕೂ ಹೊಂದಾಣಿಕೆ ರಾಜಕಾರಣ ನಡೆಯುವುದಿಲ್ಲ. ಕೆಲ ಸಚಿವರು ವಿಧಾನಸೌಧದ ಮೂರನೇ ಮಹಡಿಯಲ್ಲಿ, ಇನ್ನೂ ಕೆಲವರು ಕ್ಷೇತ್ರಕ್ಕೆ ಸೀಮಿತರಾಗಿ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ಅಂಥವರಿಗೆ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಿವಿಮಾತು ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.