ದಾವಣಗೆರೆ: ಪಾಲಿಕೆ ವತಿಯಿಂದ ಒಂದನೇ ವಾರ್ಡ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಪೌರ ಕಾರ್ಮಿಕರ ವಸತಿಗೃಹಗಳ ಕಾಮಗಾರಿ ಯಾವುದೇ ರೀತಿಯಲ್ಲಿ ಕಳಪೆ ಆಗಬಾರದು ಎಂದು ಮೇಯರ್ ಎಸ್.ಟಿ. ವೀರೇಶ್ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.
₹ 40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಮಾಡಿ ಅವರು ಮಾತನಾಡಿದರು.
ಪಾಲಿಕೆಯ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾ ಪ್ರಕಾಶ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೋಣ್ಯಪ್ಪ, ಪಾಲಿಕೆ ಸದಸ್ಯರಾದ ಜಿ.ಡಿ. ಪ್ರಕಾಶ, ಸೂಪರಿಂಟೆಂಡೆಂಟ್ ಎಂಜಿನಿಯರ್ ಉದಯಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಂದೀಪ್, ಪ್ರೀತಂ, ಸಹಾಯಕ ಎಂಜಿನಿಯರ್ ಚೇತನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.