ADVERTISEMENT

ಆರೋಗ್ಯ ಇಲಾಖೆ ನೌಕರರಿಂದ ಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 14:27 IST
Last Updated 5 ಅಕ್ಟೋಬರ್ 2020, 14:27 IST
ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡದಿರುವುದನ್ನು ವಿರೋಧಿಸಿ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ದಾವಣಗೆರೆಯ ವಿಶ್ವೇಶ್ವರಯ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು
ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡದಿರುವುದನ್ನು ವಿರೋಧಿಸಿ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ದಾವಣಗೆರೆಯ ವಿಶ್ವೇಶ್ವರಯ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು   

ದಾವಣಗೆರೆ: ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದೆ. ವಿಶ್ವೇಶ್ವರಯ್ಯ ಪಾರ್ಕ್‌ನಲ್ಲಿ ಸೋಮವಾರ ಪತ್ರ ಚಳವಳಿ ನಡೆಸಿದರು. ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ರಾಜ್ಯ ಸಮಿತಿ ಕಳೆದ ಸೆ.24ರಿಂದ ಕೆಲಸ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆಕೊಟ್ಟಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೆಲಸ ಖಾಯಂ ಮಾಡಬೇಕು. ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದೇ ಅಧಿಕಾರಿಗಳ ಮೂಲಕ ಶಿಸ್ತುಕ್ರಮದ ಎಚ್ಚರಿಕೆ ನೀಡಲು ನಿರ್ದೇಶನ ನೀಡುತ್ತಿರುವುದು ವಿಷಾದನೀಯ’ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹಾಲಸ್ವಾಮಿ ತಿಳಿಸಿದರು.

ಕೋವಿಡ್ ಸಂದರ್ಭ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಮುಂಚೂಣಿಯಲ್ಲಿ ಕೆಲಸ ಮಾಡಿದ್ದಾರೆ. ನೋಟಿಸ್ ಜಾರಿ ಮಾಡುವ ಮೂಲಕ ನ್ಯಾಯಯುತ ಹೋರಾಟ ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ADVERTISEMENT

ಸಂಘದ ಉಪಾಧ್ಯಕ್ಷ ಡಾ. ಮಂಜುನಾಥ್, ಮಂಜುನಾಥ್ ಎ.ಎಲ್, ಲೀಲಾವತಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ. ಅಂದನಗೌಡ ಪಾಟೀಲ್, ಖಜಾಂಚಿ ಅಂಬರೀಷ್, ಸಂಘಟನಾ ಕಾರ್ಯದರ್ಶಿ ಸಚಿನ್, ರವಿಕುಮಾರ್ ಹೊಳಲ್ಕೆರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.