ADVERTISEMENT

ದಾವಣಗೆರೆ ಜಿಲ್ಲೆಯಲ್ಲಿ ಭರ್ಜರಿ ಮದ್ಯ ವ್ಯಾಪಾರ

ಮಧ್ಯಾಹ್ನಕ್ಕೆ ಖಾಲಿ: ನಗರದ ಮದ್ಯಪ್ರಿಯರಿಗೆ ನಿರಾಸೆ

​ಪ್ರಜಾವಾಣಿ ವಾರ್ತೆ
Published 4 ಮೇ 2020, 17:13 IST
Last Updated 4 ಮೇ 2020, 17:13 IST
ದಾವಣಗೆರೆ ಜಿಲ್ಲೆಯ ತುರ್ಚಘಟ್ಟ ಗ್ರಾಮದಲ್ಲಿ ಎಂಆರ್‌ಪಿ ಮದ್ಯದ ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಖರೀದಿಸಿದರು.  –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆ ಜಿಲ್ಲೆಯ ತುರ್ಚಘಟ್ಟ ಗ್ರಾಮದಲ್ಲಿ ಎಂಆರ್‌ಪಿ ಮದ್ಯದ ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಖರೀದಿಸಿದರು.  –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ಮಹಾನಗರ ಪಾಲಿಕೆ ಹೊರತುಪಡಿಸಿ ಜಿಲ್ಲೆಯಲ್ಲಿ 52 ಸಾವಿರ ಲೀಟರ್ ಐಎಂಎಲ್‌ ಹಾಗೂ 15 ಸಾವಿರ ಲೀಟರ್ ಬಿಯರ್ ಮಾರಾಟವಾಗಿದೆ.

ನಗರದಲ್ಲಿ ಬೆಳಿಗ್ಗೆ 9 ಗಂಟೆಗೆ ಮದ್ಯದ ಅಂಗಡಿಗಳು ತೆರೆಯುತ್ತವೆ ಎಂದು ಕಾದು ಕುಳಿತ ಮದ್ಯಪ್ರಿಯರಿಗೆ ನಿರಾಸೆ ಕಾದಿತ್ತು. ಭಾನುವಾರ ಒಂದೇ ದಿವಸ 21 ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ಯಾವುದೇ ಮದ್ಯದ ಅಂಗಡಿಗಳನ್ನು ತೆರೆಯುವ ಆಗಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಮದ್ಯದ ಅಂಗಡಿಗಳನ್ನು ತೆರೆದಿರಲಿಲ್ಲ.

ಕಂಟೇನ್‌ಮೆಂಟ್‌ ಝೋನ್ ಹೊರತುಪಡಿಸಿ ಗ್ರಾಮೀಣ ಹಾಗೂ ವಿವಿಧ ತಾಲ್ಲೂಕುಗಳಲ್ಲಿ ಭರ್ಜರಿಯಾಗಿ ಮದ್ಯ ಮಾರಾಟವಾಗಿದೆ. ಮಧ್ಯಾಹ್ನದ ವೇಳೆಗೆ ಮದ್ಯ ಖಾಲಿಯಾಗಿದೆ.

ADVERTISEMENT

ಗ್ರಾಮೀಣ ಭಾಗಕ್ಕೆ ಮದ್ಯಪ್ರಿಯರ ಲಗ್ಗೆ

ನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ತೆರೆಯದ ಹಿನ್ನೆಲೆಯಲ್ಲಿ ನಗರ ಪ್ರದೇಶದ ಮದ್ಯಪ್ರಿಯರು ಗ್ರಾಮೀಣ ಭಾಗಗಳ ಮದ್ಯದ ಅಂಗಡಿಗಳಿಗೆ ಲಗ್ಗೆ ಇಟ್ಟಿದ್ದು, ಎಂಆರ್‌ಪಿ ಬಾರ್‌ಗಳಲ್ಲಿ ಹೆಚ್ಚಿನ ಮಂದಿ ಇದ್ದರು. ನಗರದ ದೇವರಬೆಳಕೆರೆ, ತುರ್ಚಘಟ್ಟ, ಲೋಕಿಕೆರೆ ಮುಂತಾದ ಗ್ರಾಮಗಳಲ್ಲಿ ಮದ್ಯ ಖರೀದಿ ಜೋರಾಗಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.