ADVERTISEMENT

ಲಾಕ್‌ಡೌನ್‌ ಮುಂದುವರಿಕೆ: ದಾವಣಗೆರೆಯಲ್ಲಿ ಮೂರು ದಿನ ಖರೀದಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 3:44 IST
Last Updated 6 ಜೂನ್ 2021, 3:44 IST
ಮಹಾಂತೇಶ ಬೀಳಗಿ
ಮಹಾಂತೇಶ ಬೀಳಗಿ   

ದಾವಣಗೆರೆ: ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಜೂನ್ 14ರ ವರೆಗೆ ಮುಂದುವರಿಸಲಾಗಿದೆ. ಖರೀದಿಗೆ ವಾರದಲ್ಲಿ ಎರಡು ದಿನ ಇದ್ದ ಅವಕಾಶವನ್ನು ಮೂರು ದಿನಗಳಿಗೆ ಹೆಚ್ಚಿಸಲಾಗಿದೆ. ಜೂನ್‌ 7, 9 ಮತ್ತು 11ರಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಖರೀದಿ ಮಾಡಲು ಅವಕಾಶ ನೀಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಮದ್ಯದ ಅಂಗಡಿಗಳಿಗೆ ಈ ಮೂರು ದಿನ ಮಧ್ಯಾಹ್ನದವರೆಗೆ ಅವಕಾಶ ನೀಡಲಾಗಿದೆ.ಉಳಿದ ದಿನಗಳಲ್ಲಿ ಹಾಲು ಮತ್ತು ಔಷಧಗಳನ್ನು ಹೊರತುಪಡಿಸಿ ಸಂಪೂರ್ಣ
ಬಂದ್ ಇರುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಈ ಸಮಯದಲ್ಲಿ ಯಾವುದೇ ಮದುವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ADVERTISEMENT

ಹಿಂದಿನ ನಿಯಮಗಳೇ ಜಾರಿಯಲ್ಲಿರುತ್ತವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.