ADVERTISEMENT

ಲೋಕ್ ಅದಾಲತ್ :635 ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 2:54 IST
Last Updated 20 ಸೆಪ್ಟೆಂಬರ್ 2020, 2:54 IST
ಜಗಳೂರಿನಲ್ಲಿ ಶನಿವಾರ ನ್ಯಾಯಾಧೀಶ ಜಿ. ತಿಮ್ಮಯ್ಯ ರಾಜೀಸಂಧಾನ ನಡೆಸಿದರು
ಜಗಳೂರಿನಲ್ಲಿ ಶನಿವಾರ ನ್ಯಾಯಾಧೀಶ ಜಿ. ತಿಮ್ಮಯ್ಯ ರಾಜೀಸಂಧಾನ ನಡೆಸಿದರು   

ಜಗಳೂರು:ಇಲ್ಲಿನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಶನಿವಾರ ನಡೆದ ಮೆಗಾ ಲೋಕ್ ಅದಾಲತ್‌ನಲ್ಲಿ ಒಟ್ಟು 635 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥವಾಗಿದ್ದು, ₹ 23.46 ಲಕ್ಷ ಜಮೆಯಾಗಿದೆ.

ರಾಜಿಯಾಗಬಲ್ಲ 3 ಕ್ರಿಮಿನಲ್ ಪ್ರಕರಣಗಳು ಹಾಗೂ 3 ಚೆಕ್ ಬೌನ್ಸ್ ಪ್ರಕರಣಗಳು ಮತ್ತು ಬ್ಯಾಂಕ್‌ಗಳಿಗೆ ಸಂಬಂಧಿಸಿದ 2 ಪ್ರಕರಣಗಳು ಇತ್ಯರ್ಥವಾಗಿದ್ದು, ಈ ಪ್ರಕರಣಗಳಿಂದ ₹ 8.30 ಲಕ್ಷ ಜಮೆಯಾಗಿದೆ.

565 ಪ್ರಕರಣಗಳು ಹಾಗೂ ತಪ್ಪೊಪ್ಪಿಗೆಗೆ ಅವಕಾಶ ಇರುವ 39 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ನ್ಯಾಯಾಧೀಶ ಜಿ. ತಿಮ್ಮಯ್ಯ ತಿಳಿಸಿದ್ದಾರೆ.

ADVERTISEMENT

ಕೋವಿಡ್ ಕಾರಣ ಪ್ರಕರಣಗಳ ಪಕ್ಷಗಾರರೊಂದಿಗೆ ವಿಡಿಯೊ ಸಂವಾದದ ಮೂಲಕ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಒಟ್ಟು ಸಿವಿಲ್, ಕ್ರಿಮಿನಲ್ ಹಾಗೂ ಇತರೆ ಸೇರಿ ಒಟ್ಟು 635 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥವಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.