ADVERTISEMENT

ಲೋಕ ಅದಾಲತ್‌: ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾದ 23 ಜೋಡಿಗಳು

9,360 ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 13 ಜುಲೈ 2025, 6:34 IST
Last Updated 13 ಜುಲೈ 2025, 6:34 IST
<div class="paragraphs"><p>ದಾವಣಗೆರೆಯ ಕೌಟಂಬಿಕ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾದ ದಂಪತಿಗಳು </p></div>

ದಾವಣಗೆರೆಯ ಕೌಟಂಬಿಕ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾದ ದಂಪತಿಗಳು

   

–ಪ್ರಜಾವಾಣಿ ಚಿತ್ರ

ADVERTISEMENT

ದಾವಣಗೆರೆ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ಒಟ್ಟು 9,360 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.‌ ₹14,04,66,571 ಮೊತ್ತದ ವ್ಯವಹಾರವನ್ನು ನ್ಯಾಯಾಧೀಶರು ಇತ್ಯರ್ಥಪಡಿಸಿದರು. ಲೋಕ ಅದಾಲತ್‌ನಲ್ಲಿ ಒಟ್ಟು 18,024 ವಿವಿಧ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗಿತ್ತು. 

2,62,712 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಮುಕ್ತಾಯಗೊಳಿಸಿ, ₹72,62,10,788 ಮೊತ್ತವನ್ನು ಸರ್ಕಾರಕ್ಕೆ ರಾಜೀ ಸಂಧಾನದ ಮೂಲಕ ಭರಿಸಿಕೊಡಲಾಗಿದೆ.

ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ ಪ್ರಕರಣ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 2 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಸ್ವಾಧೀನ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜೀ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9,360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಕರೆಣ್ಣವರ ತಿಳಿಸಿದರು.

ಮತ್ತೆ ಒಂದಾದ ಜೋಡಿಗಳು

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 23 ಜೋಡಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾದವು. ಜಿಲ್ಲೆಯಲ್ಲಿ ಒಟ್ಟು 225 ಜೋಡಿಗಳು ವಿವಿಧ ಕಾರಣಗಳನ್ನು ನೀಡಿ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ 20 ಪ್ರಕರಣಗಳು ಹಾಗೂ ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯಗಳಲ್ಲಿ ತಲಾ ಒಂದರಂತೆ ಒಟ್ಟು 23 ದಂಪತಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡರು. ರಾಷ್ಟ್ರೀಯ ಲೋಕ್ ಅದಾಲತ್‌ನಿಂದ ಒಂದುಗೂಡಿ ಸಾಗಲು ಅನುಕೂಲವಾಯಿತು ಎಂದು ದಂಪತಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.