
ಚಿನ್ನ, ಬೆಳ್ಳಿ
(ಸಾಂದರ್ಭಿಕ ಚಿತ್ರ)
ದಾವಣಗೆರೆ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಮನೆ ಮೇಲೆ ಮಂಗಳವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 1 ಕೆ.ಜಿ. 700 ಗ್ರಾಂ ಚಿನ್ನಾಭರಣ ಹಾಗೂ 10 ಕೆ.ಜಿ ಬೆಳ್ಳಿ ಸಾಮಗ್ರಿ ಪತ್ತೆಯಾಗಿದೆ.
ನಗರದ ಆಂಜನೇಯ ಬಡಾವಣೆಯ ಮನೆ, ಚನ್ನಗಿರಿ ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.
‘ಮನೆಯಲ್ಲಿ ₹ 7.5 ಲಕ್ಷ ನಗದು ಪತ್ತೆಯಾಗಿದೆ. ಎರಡು ಮನೆ, 6 ನಿವೇಶನಗಳ ದಾಖಲೆಗಳು ಪತ್ತೆಯಾಗಿವೆ. ಕೆಲವನ್ನು ಇವರೇ ಖರೀದಿಸಿದ್ದು, ಇನ್ನು ಕೆಲವು ಸಂಬಂಧಿಕರಿಂದ ದಾನ ಪಡೆದಿರುವುದು ಪರಿಶೀಲನೆಯಲ್ಲಿ ಗೊತ್ತಾಗಿದೆ’ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.
ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.