
ಜೆ. ಪ್ರಭು
ದಾವಣಗೆರೆ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಅವರ ಮನೆ ಸೇರಿದಂತೆ ಮೂರು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ನಗರದ ಆಂಜನೇಯ ಬಡಾವಣೆಯ 12 ಕ್ರಾಸ್‌ನಲ್ಲಿರುವ ಪ್ರಭು ಅವರ ಮನೆ, ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ನಡೆದಿದೆ.
ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಡಿವೈಎಸ್‌ಪಿ ಕಲಾವತಿ, ಇನ್‌ಸ್ಪೆಕ್ಟರ್ ಗುರುಬಸವರಾಜ್ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ಲೋಕಾಯುಕ್ತ ಕಚೇರಿ ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.