ADVERTISEMENT

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಚನ್ನಗಿರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 8:55 IST
Last Updated 3 ಮಾರ್ಚ್ 2023, 8:55 IST
ಚನ್ನಗಿರಿ ತಾಲ್ಲೂಕಿನ ಚನ್ನೇಶಪುರ (ಮಾಡಾಳ್) ಗ್ರಾಮದ  ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯ ಮುಂದೆ ಗುರುವಾರ ಜನರು ಸೇರಿರುವುದು
ಚನ್ನಗಿರಿ ತಾಲ್ಲೂಕಿನ ಚನ್ನೇಶಪುರ (ಮಾಡಾಳ್) ಗ್ರಾಮದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯ ಮುಂದೆ ಗುರುವಾರ ಜನರು ಸೇರಿರುವುದು   

ಚನ್ನಗಿರಿ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲೂಎಸ್ಎಸ್ ಇಲಾಖೆಯ ಮುಖ್ಯ ಲೆಕ್ಕ ಪರಿಶೋಧಕ ಪ್ರಶಾಂತ್ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಗುರುವಾರ ತಾಲ್ಲೂಕಿನ ಚನ್ನೇಶಪುರ(ಮಾಡಾಳ್) ಗ್ರಾಮದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಶೋಧ ನಡೆಸಿದರು.

ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಅಧಿಕಾರಿಗಳು ಇಡೀ ಮನೆಯನ್ನು ಶೋಧ ಮಾಡಿದರು. 4 ಬ್ಯಾಗ್‌ಗಳಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಸಂಗ್ರಹಿಸಿದರು.

ಶೋಧ ಸಮಯದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರ ಪತ್ನಿ ಲೀಲಾವತಿ ವಿರೂಪಾಕ್ಷಪ್ಪ ಹಾಗೂ ಎರಡನೇ ಪುತ್ರ ಪ್ರವೀಣ್ (ರಾಜು) ಮನೆಯಲ್ಲಿ ಇದ್ದರು.

ADVERTISEMENT

ಬೆಂಗಳೂರಿನ ಕೆಎಸ್‌ಡಿಎಲ್ ಕಚೇರಿಯಲ್ಲಿ ಬುಧವಾರ ಟೆಂಡರ್‌ಗೆ ಸಂಬಂಧಪಟ್ಟಂತೆ ಟೆಂಡರ್‌ದಾರನಿಂದ ₹ 40 ಲಕ್ಷ ಲಂಚ ಪಡೆಯುತ್ತಿದ್ದಾಗ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.