ADVERTISEMENT

ದಾವಣಗೆರೆ: ಲಾರಿ ಮಾಲೀಕರ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 4:36 IST
Last Updated 26 ನವೆಂಬರ್ 2022, 4:36 IST

ದಾವಣಗೆರೆ:ದಾವಣಗೆರೆ ಜಿಲ್ಲಾ ಲಾರಿ ಮಾಲೀಕರು ಹಾಗೂ ಟ್ರಾನ್ಸ್‌ಪೋರ್ಟ್ ಏಜೆಂಟ್ ಅಸೋಸಿಯೇಷನ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನ.27ರಂದು ಲಾರಿ ಮಾಲೀಕರ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸೈಯದ್ ಸೈಫುಲ್ಲಾ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರಿನ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30ಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ.ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್‌ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್, ಮೇಯರ್ ಜಯಮ್ಮ ಗೋಪಿನಾಯ್ಕ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಹೆಚ್ಚುವರಿ ಸಾರಿಗೆ ಆಯುಕ್ತ ಎಸ್. ಮಲ್ಲಿಕಾರ್ಜುನ್ ಭಾಗವಹಿಸಲಿದ್ದಾರೆ ಎಂದರು. ಸಾರಿಗೆ ಉದ್ಯಮದತ್ತ ಸರ್ಕಾರ ತಾರತಮ್ಯ ಧೋರಣೆ ತಾಳಿರುವ ಬಗ್ಗೆ ಚರ್ಚಿಸಲಾಗುವುದು. ವಾಹನ ಅಪಘಾತ ತಡೆಗೆ ಸರ್ಕಾರಗಳು ಯಾವುದೇ ಯೋಜನೆ ರೂಪಿಸದಿರುವ ಕುರಿತು ಚರ್ಚೆ ನಡೆಯಲಿದೆ. ಲಾರಿ ಚಾಲಕರಿಗಾಗಿ ಪ್ರತಿ ಜಿಲ್ಲೆಯಲ್ಲಿ ಐದು ಎಕರೆ ವಿಸ್ತೀರ್ಣದ ಜಾಗದಲ್ಲಿ ಸುಸಜ್ಜಿತ ತಂಗುದಾಣ ನಿರ್ಮಿಸಲು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದರು. ದಾದಾಪೀರ್, ನೇತಾಜಿರಾವ್, ಚಂದ್ರನಾಯ್ಕ, ಸೋಗಿ ಮುರುಗೇಶ್, ಪಿ.ಜಯಣ್ಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.