ದಾವಣಗೆರೆ: ಆರೂಢ ದಾಸೋಹಿ ಮಾಗನೂರು ಬಸಪ್ಪ ಪ್ರಶಸ್ತಿಗೆ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದೇವರು ಹಾಗೂ ವಚನ ಸಾಹಿತ್ಯ ಸಂಶೋಧಕ ವೀರಣ್ಣ ಬಿ.ರಾಜೂರ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಾಗನೂರು ಬಸಪ್ಪ ಪ್ರತಿಷ್ಠಾನ ಸ್ಥಾಪಿಸಿದ ರಾಜ್ಯಮಟ್ಟದ ಪ್ರಶಸ್ತಿಯು ₹ 50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.
‘ಜುಲೈ 27ರಂದು ಬೀದರ್‌ನಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಬಸವಲಿಂಗ ಪಟ್ಟದೇವರು ಅವರಿಗೆ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ಹಿರೆಮಠದ ಗುರುಬಸವ ಪಟ್ಟದೇವರು ಸಾನ್ನಿಧ್ಯ ವಹಿಸಲಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷ್ ಅಧ್ಯಕ್ಷ ಬಿ.ವಾಮದೇವಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಆ.3ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ವೀರಣ್ಣ ರಾಜೂರ ಅವರಿಗೆ 2024ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಸಿ.ಸೋಮಶೇಖರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.