ADVERTISEMENT

ಮಾದಿಗ ಸಮಾಜ: ನಾಳೆ ಜನಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2024, 14:39 IST
Last Updated 12 ಮಾರ್ಚ್ 2024, 14:39 IST

ಹರಿಹರ: ತಾಲ್ಲೂಕು ಮಾದಿಗ ಸಮಾಜದಿಂದ ಮಾದಾರ ಚನ್ನಯ್ಯ ಜಯಂತಿ ಅಂಗವಾಗಿ ಮಾರ್ಚ್‌ 13ರಂದು ಮಧ್ಯಾಹ್ನ 12ಕ್ಕೆ ನಗರದ ಸಿದ್ದೇಶ್ವರ ಪ್ಯಾಲೇಸ್‌ನಲ್ಲಿ ಜನಜಾಗೃತಿ ಸಮಾವೇಶ ಹಾಗೂ ಸರಳ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿದೆ.

ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕೋಡಿಹಳ್ಳಿ ಬೃಹನ್ಮಠದ ಷಡಾಕ್ಷರಮುನಿ ದೇಶೀಕೇಂದ್ರ ಸ್ವಾಮೀಜಿ ಹಾಗೂ ವಿವಿಧ ಸಮುದಾಯದ ಸ್ವಾಮೀಜಿಗಳು ಸಾನ್ನಿಧ್ಯ ವಹಿಸುವರು.

ಮಾದಿಗ ಸಮಾಜದ ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಆನಂದಕುಮಾರ್ ಅದ್ಯಕ್ಷತೆ ವಹಿಸುವರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಕಾರಯಕ್ರಮ ಉದ್ಘಾಟಿಸುವರು. ದಾವಣಗೆರೆ ವಿಶ್ವವಿದ್ಯಾನಿಲಯದ ಕನ್ನಡ ಭಾಷಾ ಪ್ರಾಧ್ಯಾಪಕ ಡಾ.ಎಚ್.ವಿಶ್ವನಾಥ ಉಪನ್ಯಾಸ ನೀಡುವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.