ADVERTISEMENT

ಬಿ.ಟಿ.ಲಲಿತಾ ನಾಯ್ಕ್‌ಗೆ ಮಾಗನೂರು ಬಸಪ್ಪ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2023, 16:32 IST
Last Updated 24 ಆಗಸ್ಟ್ 2023, 16:32 IST
ಬಿ.ಟಿ. ಲಲಿತಾ ನಾಯ್ಕ್‌
ಬಿ.ಟಿ. ಲಲಿತಾ ನಾಯ್ಕ್‌   

ದಾವಣಗೆರೆ: ‘ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದಿಂದ ನೀಡಲಾಗುವ 2022ನೇ ಸಾಲಿನ ‘ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ರಾಜ್ಯಮಟ್ಟದ ಪ್ರಶಸ್ತಿಗೆ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ಆಯ್ಕೆಯಾಗಿದ್ದಾರೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

‘ವಚನ ಸಾಹಿತ್ಯ ಹಾಗೂ ಸಂಶೋಧನೆ, ಸಮಾಜ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ₹50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಲಲಿತಾ ನಾಯ್ಕ್‌ ಅವರ ಸಮಾಜಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ’ ಎಂದು ಹೇಳಿದರು.

ಕುವೆಂಪು ಕನ್ನಡ ಭವನದಲ್ಲಿ ಆಗಸ್ಟ್ 26ರಂದು ನಡೆಯುವ ಕಾರ್ಯಕ್ರಮದಲ್ಲಿ ಕಸಾಪ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಪ್ರಶಸ್ತಿ ಪ್ರದಾನ ಮಾಡುವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.