
ಹೊನ್ನಾಳಿ: ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಮೆಕ್ಕೆಜೋಳವನ್ನು ಸರಾಸರಿ ವಹಿವಾಟಿನ ಧಾರಣೆ ಆಧಾರದ ಮೇಲೆ ರೈತರಿಗೆ ಆಗುವ ಬೆಲೆ ವ್ಯತ್ಯಾಸದ ಮೊತ್ತ ಪಾವತಿಸಲು ಸರ್ಕಾರದ ಸೂಚನೆಯಂತೆ ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಜನವರಿ 12 ರಂದು ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ. ಖರೀದಿ ಪ್ರಕ್ರಿಯೆ ಒಂದು ತಿಂಗಳ ಅವಧಿವರೆಗೆ ಇರುತ್ತದೆ ಎಂದು ಎಂಪಿಎಂಸಿ ಕಾರ್ಯದರ್ಶಿ ಮಂಜುನಾಥ್ ಹೇಳಿದರು.
ಮಂಗಳವಾರ ಎಪಿಎಂಸಿ ಕಚೇರಿಯಲ್ಲಿ ಮಹಾಮಂಡಳದ ವತಿಯಿಂದ ನಡೆದ ರೈತರ ಹೆಸರು ನೋಂದಣಿ ಸಂದರ್ಭದಲ್ಲಿ ಮಾತನಾಡಿದರು.
ರೈತರು ಆಧಾರ್ ಕಾರ್ಡ್, ಪಹಣಿ, ಕೃಷಿ ಇಲಾಖೆ ನೀಡಿರುವ ಎಫ್‌ಐಡಿ ಸಂಖ್ಯೆಯೊಂದಿಗೆ ಕಚೇರಿಗೆ ಆಗಮಿಸಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಸರ್ಕಾರದ ಸೌಲಭ್ಯ ಪಡೆಯಬಹುದಾಗಿದೆ ಎಂದರು.
ರೈತರು ಎಪಿಎಂಸಿಯಲ್ಲಿ ನೋಂದಾಯಿತ ವರ್ತಕರಿಗೆ ಮೆಕ್ಕೆಜೋಳ ಮಾರಾಟ ಮಾಡಬೇಕು. ನಂತರ ವಹಿವಾಟಿನ ಆಧಾರದ ಮೇಲೆ ರೈತರಿಗೆ ದರ ವ್ಯತ್ಯಾಸದ ಮೊತ್ತವನ್ನು ಸರ್ಕಾರದಿಂದ ಪಾವತಿಸಲಾಗುವುದು. ಒಟ್ಟು 151 ರೈತರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.