ADVERTISEMENT

ದಾವಣಗೆರೆ: 'ಸೇವಾದಳ ಶಿಕ್ಷಣ ಕಡ್ಡಾಯವಾಗಲಿ’

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2023, 3:02 IST
Last Updated 23 ಫೆಬ್ರುವರಿ 2023, 3:02 IST
ದಾವಣಗೆರೆಯಲ್ಲಿ ಬುಧವಾರ ಆಯೋಜಿಸಿದ್ದ ಶಿಕ್ಷಕರ ಜಿಲ್ಲಾ ಮಟ್ಟದ ಸಹಾಯಕ ಯೋಗ, ನೈತಿಕ ಶಿಕ್ಷಣ ಶಿಬಿರವನ್ನು ಪತ್ರಕರ್ತ ಬಿ.ಎನ್.ಮಲ್ಲೇಶ್ ಉದ್ಘಾಟಿಸಿದರು.
ದಾವಣಗೆರೆಯಲ್ಲಿ ಬುಧವಾರ ಆಯೋಜಿಸಿದ್ದ ಶಿಕ್ಷಕರ ಜಿಲ್ಲಾ ಮಟ್ಟದ ಸಹಾಯಕ ಯೋಗ, ನೈತಿಕ ಶಿಕ್ಷಣ ಶಿಬಿರವನ್ನು ಪತ್ರಕರ್ತ ಬಿ.ಎನ್.ಮಲ್ಲೇಶ್ ಉದ್ಘಾಟಿಸಿದರು.   

ದಾವಣಗೆರೆ: ‘ರಾಷ್ಟ್ರೀಯ ಭಾವೈಕ್ಯ, ಶಿಸ್ತು, ದೇಶಾಭಿಮಾನ ಹಾಗೂ ಸೇವಾ ಮನೋಭಾವನೆಯನ್ನು ಮೂಡಿಸಲು ಶಾಲೆಗಳಲ್ಲಿ ಸೇವಾದಳ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು’ ಎಂದು ಪತ್ರಕರ್ತ ಬಿ.ಎನ್. ಮಲ್ಲೇಶ್ ಸಲಹೆ ನೀಡಿದರು.

ಭಾರತ ಸೇವಾದಳವು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ಜಿಲ್ಲಾ ಮಟ್ಟದ ಸಹಾಯಕ ಯೋಗ, ನೈತಿಕ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಅವರು
ಮಾತನಾಡಿದರು.

‘ದೇಶದಲ್ಲಿ ಅಪರಾಧ ಕೃತ್ಯಗಳಲ್ಲಿ ತೊಡಗಿದವರನ್ನು ಸಂರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ, ಶಿಕ್ಷಕರು ಮಕ್ಕಳಿಗೆ ಯೋಗ್ಯ ಶಿಕ್ಷಣವನ್ನು ನೀಡಿ ಉತ್ತಮ ನಾಗರಿಕರನ್ನಾಗಿ ಮಾಡಿದಲ್ಲಿ ಅವರ ಸೇವೆ ಸಾರ್ಥಕವಾಗುತ್ತದೆ’ ಎಂದರು.

ADVERTISEMENT

‘ರಾಷ್ಟ್ರೀಯ ಹಬ್ಬಗಳಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ, ಧ್ವಜ ವಂದನೆ ವಿಚಾರ ಬಂದಾಗ ದೈಹಿಕ ಶಿಕ್ಷಣ ಶಿಕ್ಷಕರ ಅಗತ್ಯ ಕಾಣುತ್ತಿದೆ’ ಎಂದು
ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅಂಬಣ್ಣ ಮಾತನಾಡಿ, ‘ಶಾಲೆಗಳಲ್ಲಿ ನೈತಿಕ ಶಿಕ್ಷಣದ ಅಗತ್ಯವಿದ್ದು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಸೇವಾದಳ ಶಿಕ್ಷಕರು ಮಕ್ಕಳಿಗೆ ಶಾರೀರಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವನ್ನು ನೀಡಬೇಕು’ ಎಂದು ಸಲಹೆ ನೀಡಿದರು.

ಚೆನ್ನಪ್ಪ ಎಚ್. ಪಲ್ಲಾಗಟ್ಟೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸತ್ಯನಾರಾಯಣ್, ಜಿಲ್ಲಾ ಕಾರ್ಯದರ್ಶಿ ಅರವಿಂದ್ ಜೆ. ಕೊಲಂಬಿ, ಕೋಶಾಧ್ಯಕ್ಷ ಎಂ. ರುದ್ರಯ್ಯ, ತಾಲ್ಲೂಕು ಸೇವಾದಳ ಅಧ್ಯಕ್ಷ ಹಾಸಬಾವಿ ಕರಿಬಸಪ್ಪ, ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ್ ಕೆ. ಬಿ. ಪರಮೇಶಪ್ಪ, ಕೇಂದ್ರ ಸಮಿತಿ ಸದಸ್ಯ ಟಿ. ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.