ADVERTISEMENT

ಪ್ರಧಾನಿ, ಗೃಹ ಸಚಿವರಿಗೆ ಫೇಸ್‌ಬುಕ್‌ನಲ್ಲಿ ಅವಹೇಳನ ಮಾಡಿದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 16:23 IST
Last Updated 11 ಆಗಸ್ಟ್ 2020, 16:23 IST
   

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ, ಅಸಹ್ಯ ಫೋಟೊಗಳನ್ನು ಶೇರ್ ಮಾಡಿರುವ ಆರೋಪದ ಮೇಲೆ ಒಬ್ಬನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಹೊನ್ನಾಳಿ ತಾಲ್ಲೂಕಿನ ಬೈರನಹಳ್ಳಿ ಗ್ರಾಮದ ನವೀನ ಜಿ.ಎಚ್. ಬಂಧಿತ. ಈ ಮೂವರೂ ನಾಯಕರ ಭಾವಚಿತ್ರಗಳನ್ನು ಎಡಿಟ್ ಮಾಡಿ ಬೇರೆ ಬೇರೆ ಪ್ರಾಣಿಗಳು ಹಾಗೂ ಮಹಿಳೆಯರ ಅಶ್ಲೀಲವಾದ ಫೋಟೊಗಳನ್ನು ಅಂಟಿಸಿ ಫೇಸ್‌ಬುಕ್‌ನಲ್ಲಿ ಈತ ಅಪ್‌ಲೋಡ್ ಮಾಡಿದ್ದ.

ಶಿವಮೂರ್ತಿ ಎಂಬವರು ನೀಡಿದ ದೂರಿನ ಮೇರೆಗೆ ಸಿಇಎನ್‌ ಠಾಣೆಯ ಪೊಲೀಸರು ನವೀನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.